ಶಿವಮೊಗ್ಗ : ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸಿ.ನಾರಾಯಣ ಗೌಡ ಅವರು ಇಂದು ಸೋಗಾನೆಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ವೀಕ್ಷಿಸಿದರು.
ಮೊದಲಿಗೆ ಪ್ಯಾಸೆಂಜರ್ ಟರ್ಮಿನಲ್ ಕಟ್ಟಡಕ್ಕೆ ಭೇಟಿ ನೀಡಿ, ಕಾಮಗಾರಿಯನ್ನು ವೀಕ್ಷಿಸಿದರು. ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಏರ್ ಟ್ರಾಫಿಕ್ ಕಂಟ್ರೋಲ್(ಎಟಿಸಿ) ಕಟ್ಟಡಕ್ಕೆ ಭೇಟಿ ನೀಡಿ ಪರಿವೀಕ್ಷಿಸಿದರು. ನಂತರ ರನ್ ವೇ ಯನ್ನು ವೀಕ್ಷಿಸಿದರು. ಈ ವೇಳೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಲೋಕೋಪಯೋಗಿ ಇಲಾಖೆ ಎಇಇ ಕಿರಣ್, ಕೆಎಸ್ಐಐಡಿಸಿ ತಾಂತ್ರಿಕ ಅಧಿಕಾರಿ ರಕ್ಷಿತ್ ಇತರೆ ಅಧಿಕಾರಿಗಳು ಇದ್ದರು.
BIGG NEWS : ಜ.28 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut
ರೈತರಿಗೆ ಮುಖ್ಯ ಮಾಹಿತಿ : ಜ.30 , 31 ರಂದು ದಾವಣಗೆರೆಯಲ್ಲಿ ಕುರಿ-ಮೇಕೆ ಸಾಕಾಣಿಕೆ ತರಬೇತಿ