ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಹೆಸರು ಬಳಸಿ ಐಶ್ವರ್ಯಗೌಡ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ನಿವಾಸದ ಮೇಲೆ ದಾಳಿ ಮಾಡಿದ್ದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಾಸಕ ವಿನಯ್ ಕುಲಕರ್ಣಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಇದೀಗ ಇಂದು ಕೂಡ ಇಡಿ ಅಧಿಕಾರಿಗಳ ಶೋಧ ಮುಂದುವರೆದಿದೆ.
ಹೌದು ಇಡಿ ಅಧಿಕಾರಿಗಳು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದಲ್ಲಿ ಪರಿಶೀಲನೆ ಇಂದು ಕೂಡ ಮುಂದುವರಿಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಶಾಸಕ ವಿನಯ್ ಕುಲಕರ್ಣಿ ನಿವಾಸದಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ. ಬ್ಯಾಂಕ್, ಆಸ್ತಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಶಾಸಕ ವಿನಯ್ ಕುಲಕರ್ಣಿ ಮನೆಯಲ್ಲಿಯೇ ಇದ್ದಾರೆ.
ಐಶ್ವರ್ಯ ಗೌಡ ವಂಚನೆ ಕೇಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರುವ ಶಂಕೆ ವ್ಯಕ್ತವಾಗಿದ್ದು, ಐಶ್ವರ್ಯ ಗೌಡ ಐಶಾರಾಮಿ ಕಾರು ಶಾಸಕ ವಿನಯ್ ಕುಲಕರ್ಣಿ ಮನೆಯಲ್ಲಿ ಪತ್ತೆಯಾಗಿತ್ತು. ಐಶ್ವರ್ಯ ಗೌಡ ಹಾಗೂ ವಿನಯ್ ಕುಲಕರ್ಣಿ ನಡುವೆ ಹಣದ ವ್ಯವಹಾರ ಕೂಡ ನಡೆದಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಶಾಸಕ ವಿನಯ್ ಕುಲಕರಣಿ ನಿವಾಸದಲ್ಲಿ ಇಡಿ ಅಧಿಕಾರಿಗಳು ದಾಖಲೆ ಪರಿಶೀಲನೆ ಮುಂದುವರಿಸಿದ್ದಾರೆ. ಇನ್ನು ಇದೇ ಪ್ರಕರಣದಲ್ಲಿ ಐಶ್ವರ್ಯ ಗೌಡರನ್ನು ನಿನ್ನೆ ಇಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.