ಬೆಂಗಳೂರು : ರಾಮನಗರ ಜಿಲ್ಲೆಯ ಚನ್ನಪಟ್ಟಣ ಉಪಚುನಾವಣೆ ಇದೀಗ ಬಾರಿ ಕಾವೇರಿತ್ತಿದ್ದು, ಈ ಒಂದು ಕ್ಷೇತ್ರದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಹೆಗಡೆ ಅವರು ಸ್ಪರ್ಧಿಸಲಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದೆ. ಈಗ ಈ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ.
‘ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ, ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆ ಮುಕ್ತಾಯದ ಬೆನ್ನಲ್ಲಿ ಶಾಸಕ ಸ್ಥಾನದಿಂದ ತೆರವಾದ ಕರ್ನಾಟಕದ ಊರು ವಿಧಾನಸಭಾ ಕ್ಷೇತ್ರಗಳಾದ ರಾಮನಗರ ಜಿಲ್ಲೆಯ ಚೆನ್ನಪಟ್ಟಣ ವಿಧಾನಸಭಾ ಕ್ಷೇತ್ರ, ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರ ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಇದೀಗ ರಾಜಕೀಯದಲ್ಲಿ ಕಾವು ಹೆಚ್ಚಾಗಿದೆ. ಅದರಲ್ಲೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಬಹಳ ಪ್ರಮುಖವಾಗಿದ್ದು ಎಚ್ ಡಿ ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್ ಪ್ರತಿಷ್ಠೆಯ ಕಣವಾಗಿ ಸ್ವೀಕರಿಸಿದ್ದಾರೆ.
ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ.
— DK Shivakumar (@DKShivakumar) June 27, 2024