ಕೊಲ್ಕತ್ತಾ: ಐಪಿಎಲ್ 2026ರ ಸೀಸನ್‌ನಲ್ಲಿ ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆ ಅವರ ಕಳಪೆ ಫಾರ್ಮ್ ಮುಂದುವರಿದಿದೆ. ಭಾನುವಾರ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಹಾನೆ ಶೂನ್ಯಕ್ಕೆ ಔಟ್ ಆಗುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಆರಂಭಿಕ ಆಟಗಾರನಾಗಿ ಅತಿ ಹೆಚ್ಚು ಬಾರಿ ‘ಡಕ್’ (ಶೂನ್ಯ) ಆದ ಅನಗತ್ಯ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ‘ಗೋಲ್ಡನ್ ಡಕ್’ (ಮೊದಲ ಎಸೆತದಲ್ಲೇ ಔಟ್) ಆಗಿದ್ದ ರಹಾನೆ, ನಿನ್ನೆ ರಾಜಸ್ಥಾನ ವಿರುದ್ಧ ಕೇವಲ 2 ಎಸೆತ ಎದುರಿಸಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.
ಐಪಿಎಲ್‌ನಲ್ಲಿ ಆರಂಭಿಕ ಬ್ಯಾಟರ್ ಆಗಿ ರಹಾನೆ ಇದುವರೆಗೆ 12 ಬಾರಿ ಶೂನ್ಯಕ್ಕೆ ಔಟ್ ಆಗಿದ್ದಾರೆ. ಈ ಮೂಲಕ 11 ಬಾರಿ ಡಕ್ ಆಗಿದ್ದ ಪಾರ್ಥಿವ್ ಪಟೇಲ್ ಅವರ ದಾಖಲೆಯನ್ನು ರಹಾನೆ ಹಿಂದಿಕ್ಕಿದ್ದಾರೆ.
ಮುಂಬೈ ಇಂಡಿಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ 67 ರನ್ ಗಳಿಸಿ ಭರ್ಜರಿ ಆರಂಭ ಪಡೆದಿದ್ದ ರಹಾನೆ, ನಂತರದ 6 ಪಂದ್ಯಗಳಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ್ದಾರೆ.








