ಮಂಡ್ಯ : ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅಖಂಡ ಕರ್ನಾಟಕ ಬಂದ್ ಆಚರಣೆ ನಡೆಯುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಪ್ರತಿಭಟನೆ ಕಾವು ಹೆಚ್ಚಾಗಿದೆ.
ಇನ್ನು ಮಂಡ್ಯ ಜಿಲ್ಲೆಯ ಸಂಜಯ್ ವೃತ್ತದಲ್ಲಿ ಕನ್ನಡ ಸೇನೆ, ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ತಲೆಯ ಮೇಲೆ ತೆನೆ ಹೊತ್ತುಕೊಂಡು ವಿನೂತನ ರೀತಿಯಾಗಿ ಪ್ರತಿಭಟನೆ ಮಾಡಿದರು. ಅಲ್ಲದೆ ಮೇಕೆದಾಟು ಯೋಜನೆ ಕುರಿತಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.