ಬೆಂಗಳೂರು: ರಾಜ್ಯಾಧ್ಯಂತ ಇಂದು ಕನ್ನಡಿಗರಿಗಾಗಿ ಕರೆ ನೀಡಿದ್ದಂತ ಅಖಂಡ ಕರ್ನಾಟಕ ಬಂದ್ ಯಶಸ್ವಿಯಾಗಿದೆ ಎಂಬುದಾಗಿ ಕನ್ನಡ ಒಕ್ಕೂಟದ ಹೋರಾಟಗಾರ ವಾಟಾಳ್ ನಾಗರಾಜ್ ಅವರು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಂದ್ ಅವರದ್ದೇ ಆದಂತ ರೂಪದಲ್ಲಿ ನಡೆದಿದೆ. ಕೆಲವು ಕಡೆ ಬಸ್ ಓಡಾಡುತಿದ್ದಾವೆ. ಜನರೇ ಇಲ್ಲ. ಬಸ್ ನಿಲ್ದಾಣದಲ್ಲಿ ಜನ ಇಲ್ಲ. ಕನ್ನಡಿಗರಿಗಾಗಿ ಕರೆದ ಬಂದ್ ಯಶಸ್ವಿಯಾಗಿದೆ ಎಂದರು.
ಬಂದ್ ಮಾಡಿದಂತ ನಮ್ಮವರನ್ನು ಬಂಧನ ಮಾಡಿದ್ದಾರೆ. ಬೆಂಗಳೂರು ಕಮೀಷನರ್ ವೈಯಕ್ತಿಕವಾಗಿ ತೆಗೆದುಕೊಂಡಿದ್ದಾರೆ. ಭಾಸ್ಕರ್ ರಾವ್ ರೀತಿ ಇವರು ರಾಜಕೀಯಕ್ಕೆ ಬರುತ್ತಾರೋ ಏನೋ ಗೊತ್ತಿಲ್ಲ. ನನಗೂ ನೋಟಿಸ್ ಕೊಟ್ಟಿದ್ದಾರೆ ಎಂದರು.
ಟೌನ್ ಹಾಲ್ ನಿಂದ ಪ್ರತಿಭಟನಾ ಮೆರವಣಿಗೆಗೆ ಅನುಮತಿ ನೀಡಲಿಲ್ಲ. ಬಂದ್ ಹತ್ತಿಕೋ ಕೆಲಸ ಮಾಡಲಾಗಿತ್ತು. ಈ ಕೆಲಸ ಮಾಡಬಾರದು. ನಾವು ಮಾಡಿರೋ ಹೋರಾಟದಲ್ಲಿ ಒಂದು ಹನಿ ನೀರು ಸಿಗದ ರೀತಿ ಆಗಬೇಕಿತ್ತು. ಆದರೂ ಯಶಸ್ಸು ಸಿಕ್ಕಿದೆ ಎಂಬುದಾಗಿ ತಿಳಿಸಿದರು.
ನಮ್ಮ ಹಕ್ಕು, ಅಸ್ತಿತ್ವ, ಸಂವಿಧಾನ ಉಳಿವಿಗೆ ಒಟ್ಟಾಗಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್
ನಾಗ್ಪುರ ಹಿಂಸಾಚಾರ: ಮತ್ತೆ 14 ಮಂದಿ ಬಂಧನ, ಬಂಧಿತರ ಸಂಖ್ಯೆ 105ಕ್ಕೆ ಏರಿಕೆ, 3 ಹೊಸ FIR ದಾಖಲು | Nagpur violence