ಬೆಂಗಳೂರು : ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಿದ್ದು, ಹಿರಿಯ ಕವಿ ಡಾ. ದೊಡ್ಡರಂಗೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
BIGG NEWS : KPSCಯಿಂದ ‘1,080 ಎಸ್ ಡಿಎ ಹುದ್ದೆ’ಗೆ ಅಭ್ಯರ್ಥಿಗಳ ‘ಅರ್ಹತಾ ಪಟ್ಟಿ’ ಪ್ರಕಟ
ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಹಾವೇರಿಯಲ್ಲಿ ನವೆಂಬರ್ 11 ರಿಂದ 13 ರವರೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ತೀರ್ಮಾನಿಸಿದ್ದು, ಹಿರಿಯ ಕವಿ ಡಾ. ದೊಡ್ಡರಂಗೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೆಲಸದ ದಿನಗಳನ್ನು ಬಳಕೆ ಮಾಡದೆ ನಿಗದಿತ ಈ ಮೂರು ರಜೆಯ ದಿನಗಳಲ್ಲಿ ಸಾಹಿತ್ಯದ ಉತ್ಸವವನ್ನು ಮಾಡಲು ತೀರ್ಮಾನಿಸಿದ್ದೇವೆ. ಹಿರಿಯ ಕವಿ ಡಾ.ದೊಡ್ಡರಂಗೇಗೌ ಅವರ ಸರ್ವಾಧ್ಯಕ್ಷತೆಯಲ್ಲಿ ಭುವನೇಶ್ವರಿಯ ಉತ್ಸವ ನಡೆಯಲಿದೆ ಎಂದು ಹೇಳಿದರು.