ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ನಡೆದಿರುವ ಆರೋಪಕ್ಕೆ ಸಂಬಂಧ ಪಟ್ಟಂತೆ ಸಚಿವ ಆರ್ ಬಿ ತಿಮ್ಮಾಪುರ್ ಇದರಲ್ಲಿ ನನ್ನದು ಏನೂ ತಪ್ಪು ಇಲ್ಲ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ನಡೆದಿದೆ ಎನ್ನುವ ವಿಚಾರವಾಗಿ ಸದನದಲ್ಲಿ ವಿರೋಧ ಪಕ್ಷಗಳು ಈ ವಿಚಾರವನ್ನು ಪ್ರಸ್ತಾಪ ಮಾಡಲಿ. ನಾನು ಅಲ್ಲಿ ಉತ್ತರ ಕೊಡುತ್ತೇನೆ ಅದಕ್ಕೆ ಸಮರ್ಥನೆ ಕೊಡುತ್ತೇನೆ. ಆದರೆ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಸಚಿವ ಆರ್ ಬಿ ತಿಮ್ಮಾಪುರ್ ತಿಳಿಸಿದರು.








