ಬೆಂಗಳೂರು : ವಿಧಾನಪರಿಷತ್ ಚುನಾವಣೆ, ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರಣದಿಂದ ಜೂನ್ ಮೊದಲ ವಾರ ಐದು ಬಾರ್ ಅಂಡ್ ರೆಸ್ಟೋರೆಂಟ್, ವೈನ್ ಸ್ಟೋರ್, ಮದ್ಯದಂಗಡಿಗಳು ಬಂದ್ ಆಗಲಿವೆ.
ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್, ಎಂಆರ್ಪಿ ಔಟ್ಲೇಟ್ಗಳು ಬಂದ್ ಆಗಲಿವೆ. ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಸಲುವಾಗಿ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನ ಬಂದ್ ಮಾಡುವಂತೆ ಆದೇಶವನ್ನು ಹೊರಡಿಸಲಾಗಿದೆ.
ಇದಲ್ಲದೇ ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ 1ರ ಸಂಜೆ 4 ಗಂಟೆಯಿಂದಲೇ ಬಾರ್ ಬಂದ್ ಆಗಲಿದ್ದು, ಜೂನ್ 3 ರವರೆಗೆ ಬಂದ್ ಮಾಡಬೇಕಾಗುತ್ತೆ. ಇನ್ನೂ ಜೂನ್ 4 ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿರುವ ಹಿನ್ನಲೆಯಲ್ಲಿ ಅಂದ ಕೂಡ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.ಜೂನ್ 6 ರಂದು ಎಂಎಲ್ಸಿ ಮತ ಎಣಿಕೆ ಇರೋದ್ರಿಂದ ಅಂದೂ ಸಹ ಬಾರ್ ಬಂದ್ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಜೂನ್ ಮೊದಲ ವಾರ ಪೂರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಅನುಮಾನವಾಗಿದೆ.