ಕೋಲಾರ: ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಮೆದುಳು ಜ್ವರ ಪತ್ತೆ ಬೆನ್ನಲ್ಲೇ ಜಿಲ್ಲೆಯಾದ್ಯಂತ ಅಲರ್ಟ್ ಘೋಷಣೆ ಮಾಡಲಾಗಿದೆ. ಸಾಂಕ್ರಮಿಕ ರೋಗ ಹರಡುವುದನ್ನು ತಪ್ಪಿಸೋದಕ್ಕೆ ” ತೊಟ್ಲಿ ಗ್ರಾಮದ 3 ಕಿ.ಮೀ. ವ್ಯಾಪ್ತಿಯಲ್ಲಿ ಹಂದಿ ಸಾಕಣೆ ಮಾಡದಂತೆ ಜಿಲ್ಲಾಡಳಿತ ನಿಷೇಧ ಹೇರಲಾಗಿದ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಾಗೃತಿ ಮೂಡಿಸುತ್ತಿದ್ದು, 1ರಿಂದ 15 ವರ್ಷದ ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಮನವಿ ಮಾಡಿಕೊಳ್ಳುತ್ತಿದೆ. ಅಲ್ಲದೆ ಗ್ರಾಮ ಪಂಚಾಯತಿಯಿಂದ ಶುಚಿತ್ಚ ಕಾಪಾಡುವಂತೆ ಆರೋಗ್ಯ ಇಲಾಖೆಯಿಂದ ಪತ್ರ ಬರೆಯಲಾಗಿದೆ.
ಮೆದುಳು ಜ್ವರ ಅಂದ್ರೆ ಒಂದು ರೀತಿಯ ಮೆದುಳಿನ ಸೋಂಕು. ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಸಾವು ಸಂಭವಿಸಲಿದೆ. ಮೆದುಳು ಸೋಂಕಿಗೆ ಪ್ರತಿ ವರ್ಷ ಸುಮಾರು 5 ಲಕ್ಷಕ್ಕೂ ಹೆಚ್ಚು ಮಕ್ಕಳು ಹಾಗೂ ವಯಸ್ಕರು ಬಲಿಯಾಗುತ್ತಿದ್ದಾರೆ. ಮೆದುಳು ಜ್ವರದ ಲಕ್ಷಣವು ಭಾರತವನ್ನೂ ಒಳಗೊಂಡಂತೆ ಜಾಗತಿಕವಾಗಿ ವೈದ್ಯಕೀಯ ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ಒಂದು ದೊಡ್ಡ ಸವಾಲಾಗಿ ನಿಂತಿದೆ. ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಅಥವಾ ಸೋಂಕು ದೃಢಪಟ್ಟ ಕೂಡಲೇ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಸಾವಿನ ಪ್ರಮಾಣವನ್ನು ಕಡಿಮೆ ಮಾಡಬಹುದು.