ಮೂಡುಬಿದಿರೆ : ಸ್ನಾನಕ್ಕೆ ಗ್ಯಾಸ್ ಗೀಸರ್ ಬಳಸುವವರೇ ಎಚ್ಚರ, ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿ ಉಸಿರುಗಟ್ಟೆ ಯುವಕನೊಬ್ಬ ಮೃತಪಟ್ಟಿರುವ ಘಟನೆ ಮೂಡಬಿದರಿಯಲ್ಲಿ ನಡೆದಿದೆ.
ಮೂಡಿಬಿದಿರೆ ಸಮೀಪದ ಕೋಟೆಬಾಗಿಲಿನ ಫ್ಯ್ಲಾಟ್ ನಲ್ಲಿ ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿದ್ದಾನೆ. ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಮೃತಪಟ್ಟ ಯುವಕ. ಶಾರಿಕ್ ರವಿವಾರ ರಾತ್ರಿ ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದರು. ತುಂಬಾ ಹೊತ್ತಾದರೂ ಶಾರಿಕ್ ಹೊರಬಾರದ ಕಾರಣ ಅವರ ಬಾತ್ ರೂಮ್ ಬಾಗಿಲು ಒಡೆದು ನೋಡಿದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ.
ಶಾರಿಕ್ ದ್ವಿತೀಯ ಪಿಯುಸಿ ಮುಗಿಸಿದ್ದು, ಮೂಡುಬಿದಿರೆಯ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಪದವಿಗೆ ಪ್ರವೇಶಾತಿ ಪಡೆದಿದ್ದರು ಎಂದು ವರದಿಯಾಗಿದೆ.