Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಅಜ್ಜಯ್ಯ ನೀಡಿದ ಶುಭ ಮುಹೂರ್ತದಂತೆ ಡಿಕೆಶಿ ಪಟ್ಟ: ಜೂ.3ರಂದು ಸಂಜೆ 4.03ಕ್ಕೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

ಅಡುಗೆಮನೆಯ ಯಡವಟ್ಟುಗಳಿಂದಲೇ ಜನ್ಮತಾಳಿದ ವಿಶ್ವದ 5 ಅತ್ಯಂತ ಜನಪ್ರಿಯ ಆಹಾರಗಳಿವು!

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾಗಿ ಆರು ಜನರು ದುರ್ಮರಣ, ಹಲವರಿಗೆ ಗಂಭೀರ ಗಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಬೆಂಗಳೂರಿನಲ್ಲಿ ‘ಹೀಟ್ ಸ್ಟ್ರೋಕ್’ ಭೀತಿ : ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
KARNATAKA

ALERT : ಬೆಂಗಳೂರಿನಲ್ಲಿ ‘ಹೀಟ್ ಸ್ಟ್ರೋಕ್’ ಭೀತಿ : ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

By kannadanewsnow57

ಭಾರತೀಯ ಹವಾಮಾನ ಇಲಾಖೆಯ ವರದಿಯ ಪ್ರಕಾರ ಮುಂದಿನ ದಿನಗಳಲ್ಲಿ ಬೆಂಗಳೂರು ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದ್ದು, ಬಿಸಿ ಗಾಳಿ (ಹೀಟ್ ವೇವ್) ಎಚ್ಚರಿಕೆ ನೀಡಲಾಗಿದೆ. ಹೀಟ್ ವೇವ್ ಸ್ಟ್ರೋಕ್ ನಿಂಧಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಫರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಲಹೆಗಳನ್ನು ನೀಡಿದೆ.

ಸಾರ್ವಜನಿಕರು ರೇಡಿಯೋ,ಟಿವಿ, ದಿನ ಪತ್ರಿಕೆಗಳಲ್ಲಿ ಬಿಸಿಲಿನ ತಾಪಮಾನದ ಕುರಿತು ಮುನ್ಸೂಚನೆಗಳನ್ನು ಪಡೆದುಕೊಳ್ಳುವುದು.ಬಾಯಾರಿಕೆಯಿಲ್ಲದಿದ್ದರೂ ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯುವುದು.

ತೆಳುವಾದ ಸಡಿಲವಾದ ಹತ್ತಿಯ ಉಡುವುಗಳನ್ನು ಧರಿಸುವುದು. ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು.ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಟೋಪಿ, ಬೂಟುಗಳು ಅಥವಾ ಪಾದರಕ್ಷೆಗಳನ್ನು ಬಳಸಿ.

ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಉತ್ತಮ, ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದರೆ ಪ್ರಯಾಣ ಮಾಡುವಾಗ ನಿಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗುವುದು.

ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿಯನ್ನು ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಿ

ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ. ಶರಬತ್. ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ಅದು ದೇಹವನ್ನು ಪುನಃ ತಂಪಾಗಿಡಲು ಸಹಾಯ ಮಾಡುತ್ತದೆ.

ಪ್ರಾಣಿ/ಪಕ್ಷಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.

ಆದಷ್ಟು ಫ್ಯಾನ್ ಗಳನ್ನು ಬಳಸಿ. ಒದ್ದೆಯಾದ ಬಟ್ಟೆಗಳನ್ನು ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಿ ಕಲಸದ ಸಮಯವನ್ನು ಆದಷ್ಟು ತಂಪಾದ ಸಮಯದಲ್ಲಿ ಮಾಡುವುದು ಹಾಗೂ ಕೆಲಸದ ಸ್ಥಳದ ಬಳಿ ತಂಪಾದ ಕುಡಿಯುವ ನೀರನ್ನು ಒದಗಿಸಿ.

 ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ನೀಡಬೇಕು.

ಕಲ್ಲಂಗಡಿ, ಕರಬೂಜ, ಕಿತ್ತಳ ದ್ರಾಕ್ಷಿ. ಅನನಾಸ್, ಸೌತೆಕಾಯಿ, ಎಳನೀರನ್ನು ಹೆಚ್ಚಾಗಿ ಸೇವಿಸಬೇಕು.

ನವಜಾತ ಶಿಶುಗಳು, ಹಿರಿಯ ನಾಗರಿಕರು ಹಾಗೂ ಚಿಕ್ಕ ಮಕ್ಕಳು. ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು. ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಇತರ ಅರೋಗ್ಯ ಸಮಸ್ಯೆಗಳಿರುವವರು. ಅದರಲ್ಲೂ ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗರೂಕತೆ ವಹಿಸಬೇಕು.

ಮಕ್ಕಳು ಅಥವಾ ಸಾಕುಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಹತ್ತಿರ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನ ತಾಪಮಾನವು ಅವರಿಗೆ/ಅವುಗಳಿಗೆ ಅಪಾಯಕಾರಿಯಾಗಬಹುದು.ಕಪ್ಪು ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಿ.

ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ.

ಬಿಸಿಲಿನ ಸಮಯದಲ್ಲಿ ಅಡುಗೆ ಮಾಡುವುದನ್ನು ತಪ್ಪಿಸಿ.ಅಡಿಗೆ ಪ್ರದೇಶವನ್ನು ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರಯಿರಿ.

ದೇಹವನ್ನು ನಿರ್ಜಲೀಕರಣಗೊಳಿಸುವ ಆಲೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ಪಾನೀಯಗಳನ್ನು ಸೇವಿಸಬೇಡಿ. ಇವು ಹೊಟ್ಟೆ ನೋವನ್ನು ಉಂಟು ಮಾಡುತ್ತದೆ.ಹಾನಿಕಾರಕವಾದ ಆಹಾರ ಮತ್ತು ಹಳಸಿದ ಆಹಾರವನ್ನು ಸೇವಿಸಬೇಡಿ.ಪಾದರಕ್ಷೆ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತಿಳಿಸಿದೆ.

ALERT: Fear of 'heat stroke' in Bengaluru: Government issues new guidelines
Share. Facebook Twitter LinkedIn WhatsApp Email

Related Posts

BIG BREAKING: ಅಜ್ಜಯ್ಯ ನೀಡಿದ ಶುಭ ಮುಹೂರ್ತದಂತೆ ಡಿಕೆಶಿ ಪಟ್ಟ: ಜೂ.3ರಂದು ಸಂಜೆ 4.03ಕ್ಕೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

1 Min Read

BREAKING: ರಾಜ್ಯಪಾಲರನ್ನು ಭೇಟಿಯಾದ ಡಿ.ಕೆ ಶಿವಕುಮಾರ್: ಸರ್ಕಾರ ರಚಿಸಲು ಥಾವರ್ ಚಂದ್ ಗೆಹ್ಲೋಟ್ ಗೆ ಆಹ್ವಾನ

1 Min Read

BREAKING: ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿದ ಸಿದ್ದು-ಡಿಕೆಶಿ: ಒಗ್ಗಟ್ಟಿನ ಮಂತ್ರ ಜಪಿಸಿ ಸರ್ಕಾರ ರಚನೆಗೆ ಹಕ್ಕು ಮಂಡನೆ!

1 Min Read
Recent News

BIG BREAKING: ಅಜ್ಜಯ್ಯ ನೀಡಿದ ಶುಭ ಮುಹೂರ್ತದಂತೆ ಡಿಕೆಶಿ ಪಟ್ಟ: ಜೂ.3ರಂದು ಸಂಜೆ 4.03ಕ್ಕೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

ಅಡುಗೆಮನೆಯ ಯಡವಟ್ಟುಗಳಿಂದಲೇ ಜನ್ಮತಾಳಿದ ವಿಶ್ವದ 5 ಅತ್ಯಂತ ಜನಪ್ರಿಯ ಆಹಾರಗಳಿವು!

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾಗಿ ಆರು ಜನರು ದುರ್ಮರಣ, ಹಲವರಿಗೆ ಗಂಭೀರ ಗಾಯ!

BREAKING: ರಾಜ್ಯಪಾಲರನ್ನು ಭೇಟಿಯಾದ ಡಿ.ಕೆ ಶಿವಕುಮಾರ್: ಸರ್ಕಾರ ರಚಿಸಲು ಥಾವರ್ ಚಂದ್ ಗೆಹ್ಲೋಟ್ ಗೆ ಆಹ್ವಾನ

State News
KARNATAKA

BIG BREAKING: ಅಜ್ಜಯ್ಯ ನೀಡಿದ ಶುಭ ಮುಹೂರ್ತದಂತೆ ಡಿಕೆಶಿ ಪಟ್ಟ: ಜೂ.3ರಂದು ಸಂಜೆ 4.03ಕ್ಕೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕರ್ನಾಟಕದ ರಾಜಕೀಯ ಬೆಳವಣಿಗೆಗಳಿಗೆ ಅಧಿಕೃತ ಮುದ್ರೆ ಬಿದ್ದಿದ್ದು, ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಡಿ.ಕೆ. ಶಿವಕುಮಾರ್ ಅವರಿಗೆ…

BREAKING: ರಾಜ್ಯಪಾಲರನ್ನು ಭೇಟಿಯಾದ ಡಿ.ಕೆ ಶಿವಕುಮಾರ್: ಸರ್ಕಾರ ರಚಿಸಲು ಥಾವರ್ ಚಂದ್ ಗೆಹ್ಲೋಟ್ ಗೆ ಆಹ್ವಾನ

BREAKING: ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿದ ಸಿದ್ದು-ಡಿಕೆಶಿ: ಒಗ್ಗಟ್ಟಿನ ಮಂತ್ರ ಜಪಿಸಿ ಸರ್ಕಾರ ರಚನೆಗೆ ಹಕ್ಕು ಮಂಡನೆ!

BIG BREAKING: ಜೂನ್.3ರಂದು ಕರ್ನಾಟಕದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ: ಕೆ.ಸಿ ವೇಣುಗೋಪಾಲ್ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.