ಬೆಂಗಳೂರು : ರಸ್ತೆಯಲ್ಲಿ ಮೊಬೈಲ್ ನೋಡಿಕೊಂಡು ಹೋಗುವವರೇ ಈ ಸುದ್ದಿಯನ್ನು ಒಮ್ಮೆ ಓದಲೇಬೇಕು. ಹೌದು ರಸ್ತೆಯಲ್ಲಿ ತೆರಳುವಾಗ ಖದೀಮರು ಮೈ ಮರೆತರೆ ಹೊಂಚು ಹಾಕಿ, ಮೊಬೈಲ್ ಕಳ್ಳತನ ಮಾಡುತ್ತಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ಇದೀಗ ಮೊಬೈಲ್ ಕಳವು ಆಗಿದೆ. ರಸ್ತೆಯಲ್ಲಿ ಬರುತ್ತಿದ್ದವನಿಂದ ಮೊಬೈಲ್ ಕದ್ದು ಖದೀಮರು ಪರಾರಿಯಾಗಿದ್ದಾರೆ.
ಬೆಂಗಳೂರಿನ ರಾಜಾಜಿನಗರದಲ್ಲಿ ಸ್ಕೂಟರ್ ನಲ್ಲಿ ಬಂದ ಇಬ್ಬರು ಖದೀಮರು ರಸ್ತೆಯಲ್ಲಿ ಯುವಕನು ಮೊಬೈಲ್ ನೋಡಿಕೊಂಡು ಹೋಗುತ್ತಿದ್ದ. ಈ ವೇಳೆ ಆತನ ಕೈಯಿಂದ ಮೊಬೈಲ್ ಕಸಿದು ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾರೆ. ಸೆಪ್ಟೆಂಬರ್ 17ರಂದು ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯಕ್ಕೆ ಪೊಲೀಸರು ಮೊಬೈಲ್ ಕದ್ದ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.







