ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿತ್ತು. ಅಳವಡಿಸದೇ ಇದ್ದರೇ ದಂಡ ಕಟ್ಟೋದಕ್ಕೆ ರೆಡಿಯಾಗಿ ಎನ್ನಲಾಗಿತ್ತು. ಆದರೇ ಈಗ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ನವೆಂಬರ್.20ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಹೈಕೋರ್ಟ್ ಗಡುವು ವಿಸ್ತರಿಸಿದೆ.
ಅತಿ ಸುರಕ್ಷಿತ ನೋಂದಣಿ ಫಲಕ (High Security Registration Plates- HSRP) ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ನ್ಯಾಯಪೀಠವನ್ನು ಮತ್ತಷ್ಟು ಕಾಲಾವಕಾಶ ನೀಡುವಂತೆ ಕೋರಿದ್ದರು. ಮನವಿ ಪರಿಗಣಿಸಿದಂತ ನ್ಯಾಯಾಲಯವು ವಿಚಾರಣೆ ಮುಂದೂಡಿಕೆ ಮಾಡಿದೆ.
ಇದನ್ನೇ ದುರುಪಯೋಗಪಡಿಸಿಕೊಳ್ಳಲು ಹಲವು ಸೈಬರ್ ವಂಚಕರು ಮುಂದಾಗಿದ್ದು ನಕಲಿ ಕ್ಯೂ ಆರ್ ಕೋಡ್ ಗಳ ಮೂಲಕ ಗ್ರಾಹಕರ ಸಂಪೂರ್ಣ ಹಣವನ್ನು ಲಪಟಾಯಿಸಲು ಕಾದು ಕುಳಿತಿದ್ದಾರೆ. ನಂಬರ್ ಪ್ಲೇಟ್ ಅಳವಡಿಕೆಗಳು ಅವಧಿ ವಿಸ್ತರಣೆ ಮಾಡಲಾಗಿದ್ದು, ಸೈಬರ್ ವಂಚಕರು ಫುಲ್ ಆಕ್ಟಿವ್ ಆಗಿದ್ದು, ಅಮಾಯಕ ಗ್ರಾಹಕರೇ ಇವರಿಗೆ ಟಾರ್ಗೆಟ್.ನೋಂದಣಿ ಬಳಿಕ ಸಿಗುವ ಕ್ಯೂ ಆರ್ ಕೋಡ್ಗಳನ್ನು ನಕಲಿ ಮಾಡುತ್ತಿದ್ದಾರೆ. ಕ್ಯೂ ಆರ್ ಕೋಡ್ ಟಚ್ ಮಾಡುತ್ತಿದ್ದಂತೆ ಅಪರಿಚಿತರ ಖಾತೆಗೆ ಲಿಂಕ್ ಹೋಗುತ್ತಿದ್ದು ಸ್ವಲ್ಪ ಎಮಾರಿದ್ರು ನಿಮ್ಮ ಖಾತೆಯಲ್ಲಿದ್ದ ಹಣ ಖದೀಮರ ಪಾಲಾಗುತ್ತೆ ಆದ್ದರಿಂದ ಆದಷ್ಟು ಗ್ರಾಹಕರು ಎಚ್ಚರದಿಂದಿರಿ.