ಚಿಕ್ಕಮಗಳೂರು : ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆಗೆ ಕೊಡುವ ಪೋಷಕರೇ ಎಚ್ಚರ,ಅಪ್ರಾಪ್ತ ಮಗನಿಗೆ ಬೈಕ್ ಚಾಲನೆ ಮಾಡಲು ನೀಡಿದ್ದ ವ್ಯಕ್ತಿಗೆ ಕೋರ್ಟ್ 25 ಸಾವಿರ ರೂ. ದಂಡ ವಿಧಿಸಿದೆ.
ಚಿಕ್ಕಮಗಳೂರಿನಲ್ಲಿ ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ಅವಕಾಶ ನೀಡಿದ್ದ ವ್ಯಕ್ತಿಗೆ ನ್ಯಾಯಾಲಯ ರೂ.25,000 ದಂಡ ವಿಧಿಸಿರುವುದು, ಪಾಲಕರ ಹಾಗೂ ವಾಹನ ಮಾಲೀಕರಿಗೆ ಸ್ಪಷ್ಟ ಎಚ್ಚರಿಕೆಯಾಗಿದೆ.
ಹೌದು, ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡುವ ಪೋಷಕರು ಎಚ್ಚರ ವಹಿಸಬೇಕು. ಇಲ್ಲವಾದಲ್ಲಿ ಭಾರಿ ದಂಡ ಕಟ್ಟಬೇಕಾಗುತ್ತದೆ. ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ನೀಡಿದ್ದ ವ್ಯಕ್ತಿಯ ವಿರುದ್ಧ 2024 ರಲ್ಲಿ ಚಿಕ್ಕಮಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಘನ 1 ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು & JMFC ನ್ಯಾಯಾಲಯ, ಚಿಕ್ಕಮಗಳೂರು ರೂ.25,000/- ದಂಡ ವಿಧಿಸಿ ಆದೇಶ ಹೊರಡಿಸಿದೆ.








