ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ, ಆಹಾರ ಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹ ಪಡಿತರ ಚೀಟಿ ರದ್ದುಪಡಿಸಲು ಕ್ರಮ ವಹಿಸಲಾಗುವುದು.
ಹೌದು, ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರ ಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹ ಪಡಿತರ ಚೀಟಿ ರದ್ದುಪಡಿಸಲು ಕ್ರಮ ವಹಿಸಲಾಗುವುದು.
ಸಾರ್ವಜನಿಕ ವಿತರಣಾ ಪದ್ಧತಿಯಡಿ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಫಲಾನುಭವಿಗಳಿಗೆ ಅಕ್ಟೋಬರ್ ಮಾಹೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ವಯ ಪಡಿತರ ಧಾನ್ಯ ಬಿಡುಗಡೆ ಮಾಡಲಾಗಿದೆ. ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 35 ಕೆಜಿ ಅಕ್ಕಿ ಹಾಗೂ ಪಿ.ಹೆಚ್.ಹೆಚ್. ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿ ಮತ್ತು ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಸದಸ್ಯರಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ.
ಅಕ್ಟೋಬರ್ ತಿಂಗಳ ಕೊನೆಯವರೆಗೆ ಪ್ರತಿದಿನ ಬೆಳಿಗ್ಗೆ ಎಂಟರಿಂದ ರಾತ್ರಿ ಎಂಟು ಗಂಟೆಯವರೆಗೆ ನ್ಯಾಯಬೆಲೆ ಅಂಗಡಿಗಳನ್ನು ತೆರೆದು ಸರಿಯಾದ ಪ್ರಮಾಣದಲ್ಲಿ ಪಡಿತರ ವಿತರಿಸಬೇಕು. ಒಂದು ವೇಳೆ ಲೋಪ ದೋಷ ಕಂಡು ಬಂದಲ್ಲಿ ನ್ಯಾಯಬೆಲೆ ಅಂಗಡಿಯವರ ಮೇಲೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.