ತುಮಕೂರು: ರಾಜ್ಯದ ಪ್ರತಿ ಜಿಲ್ಲಾಸ್ಪತ್ರೆಯಲ್ಲಿ ( District Hospital ) ಸಹಾಯವಾಣಿ ( Helpline Number ) ಆರಂಭಿಸಲಾಗುವುದು. ಇಲ್ಲಿ 4 ಸಿಬ್ಬಂದಿ ಹಗಲು-ರಾತ್ರಿ ಎರಡು ಪಾಳಿಯಲ್ಲಿ ಕೆಲಸ ಮಾಡಲಿದ್ದಾರೆ. ರೋಗಿಗಳ ಕುಟುಂಬದವರು ಬಂದಾಗ ಅವರಿಗೆ ನೆರವು ನೀಡಲಾಗುತ್ತದೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ) ಹೇಳಿದ್ದಾರೆ.

BIG NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್: ‘ಪುಣ್ಯಕೋಟಿ ದತ್ತು ಯೋಜನೆ’ ಅನುಷ್ಠಾನಕ್ಕೆ ‘ವೇತನ ಕಟ್’

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ತುಮಕೂರಿನ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಸಿ ಸೆಕ್ಷನ್‌ ಹೆರಿಗೆ ಕುರಿತು ನಿಗಾ ವಹಿಸಲು ಸಮಿತಿ ರಚಿಸಲಾಗುವುದು. ಸಿ ಸೆಕ್ಷನ್‌ ಪ್ರಮಾಣ 20-40% ಒಳಗೆ ಇರಬೇಕಾಗುತ್ತದೆ. ಇದರಲ್ಲಿ ಉದ್ದೇಶಪೂರ್ವಕ ಅಥವಾ ಭ್ರಷ್ಟಾಚಾರ ಇರಬಾರದು. ಇದಕ್ಕೆ ಕಡಿವಾಣ ಹಾಕಲಾಗುವುದು. ಜಿಲ್ಲಾ ಸರ್ಜನ್‌, ಎಲ್ಲಾ ವಿಭಾಗದ ಮುಖ್ಯಸ್ಥರೊಂದಿಗೆ ಪ್ರತಿ ಶುಕ್ರವಾರ ಸಭೆ ನಡೆಸಿ ಚರ್ಚಿಸಬೇಕು. ಲೋಪಗಳು ಕಂಡುಬಂದರೆ ಕೂಡಲೇ ಕ್ರಮ ವಹಿಸಬೇಕು. ಜಿಲ್ಲಾಧಿಕಾರಿಗಳು ಜಿಲ್ಲಾಸ್ಪತ್ರೆಯನ್ನು ಪರಿಶೀಲಿಸಬೇಕೆಂದು ಸೂಚಿಸಲಾಗಿದೆ ಎಂದರು.

BIG NEWS: ಈ ತಿಂಗಳಿನಿಂದಲೇ ರಾಜ್ಯಾಧ್ಯಂತ 438 ನಮ್ಮ ಕ್ಲಿನಿಕ್ ಕಾರ್ಯಾರಂಭ – ಸಚಿವ ಸುಧಾಕರ್ | Namma Clinic

ರಾಜ್ಯದಲ್ಲಿ 438 ನಮ್ಮ ಕ್ಲಿನಿಕ್‌ಗಳನ್ನು ( Namma Clinic ) ನಿರ್ಮಿಸಲಾಗುತ್ತಿದ್ದು, 288 ಸಿದ್ಧವಾಗಿದೆ. ಇದೇ ತಿಂಗಳು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಮೊದಲಿಗೆ 200 ಕ್ಕೂ ಹೆಚ್ಚು ಕ್ಲಿನಿಕ್‌ ಆರಂಭವಾಗಲಿವೆ. ತುಮಕೂರಿನಲ್ಲಿ ಒಟ್ಟು 10 ಕ್ಲಿನಿಕ್‌ ಆರಂಭವಾಗಲಿವೆ. ಮಹಿಳೆಯರ ಕ್ಲಿನಿಕ್‌ಗೆ ʼಆಯುಷ್ಮತಿ ಕ್ಲಿನಿಕ್‌ʼ ಎಂದು ಹೆಸರಿಡಲಾಗಿದೆ ಎಂದರು.

ಕುತೂಹಲ ಮೂಡಿಸಿದ ಸಚಿವ ಜೆ.ಸಿ ಮಾಧುಸ್ವಾಮಿ-ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಭೇಟಿ

Share.
Exit mobile version