ಬೆಂಗಳೂರು: ಇನ್ಮುಂದೆ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ಮೈಸೂರು ಬಣ್ಣ ಬಳಕೆಗೆ ನಿರ್ಧರಿಸಲಾಗಿದೆ ಎಂಬುದಾಗಿ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವಂತ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಅವರು, ಇನ್ನು ಮುಂದೆ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ಮೈಸೂರು ಬಣ್ಣ ಬಳಕೆಗೆ ನಿರ್ಧರಿಸಲಾಗಿದೆ. ಇನ್ನೂ ಹೆಚ್ಚಿನ ಪುನಶ್ಚೇತನ ಕ್ರಮಗಳ ಮೂಲಕ 2024-25ನೇ ಸಾಲಿನಲ್ಲಿ ₹500 ಕೋಟಿ ಲಾಭ ಗಳಿಕೆಯ ಗುರಿ ಹೊಂದಲಾಗಿದೆ. ಆ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕಟ್ಟಿ ಬೆಳೆಸಿದ ಮೈಸೂರು ಅರಗು ಮತ್ತು ಬಣ್ಣದ ಕಾರ್ಖಾನೆ ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಮುಂದೆ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ಮೈಸೂರು ಬಣ್ಣ ಬಳಕೆಗೆ ನಿರ್ಧರಿಸಲಾಗಿದೆ. ಇನ್ನೂ ಹೆಚ್ಚಿನ ಪುನಶ್ಚೇತನ ಕ್ರಮಗಳ ಮೂಲಕ 2024-25ನೇ ಸಾಲಿನಲ್ಲಿ ₹500 ಕೋಟಿ ಲಾಭ ಗಳಿಕೆಯ ಗುರಿ ಹೊಂದಲಾಗಿದೆ. ಆ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕಟ್ಟಿ ಬೆಳೆಸಿದ ಮೈಸೂರು ಅರಗು ಮತ್ತು ಬಣ್ಣದ ಕಾರ್ಖಾನೆ ಸಂಸ್ಥೆಯನ್ನು ಮತ್ತಷ್ಟು… pic.twitter.com/GDJJ6YnCHU
— DIPR Karnataka (@KarnatakaVarthe) August 20, 2024
ಟೊಯೊಟಾ ಕಿರ್ಲೊಸ್ಕರ್ ಮೋಟರ್ಸ್ ಲಿಮಿಟೆಡ್‌ನ (ಟಿಕೆಎಂಎಲ್) ಇನೊವಾ ಹೈಕ್ರಾಸ್ ಕಾರಿನ ಬೇಡಿಕೆ ಪೂರೈಸಲು ಅಗತ್ಯವಾದ ಬಿಡಿಭಾಗಗಳನ್ನು ತಯಾರಿಸಲು ಬಿಡದಿಯಲ್ಲಿ ₹450 ಕೋಟಿ ವೆಚ್ಚದಲ್ಲಿ ಟೊಯೊಟೆಟ್ಸು ಇಂಡಿಯಾ ಆಟೊ ಪಾರ್ಟ್ಸ್ ಪ್ರೈವೇಟ್ ಲಿಮಿಟೆಡ್ ಘಟಕ ಸ್ಥಾಪಿಸಲು ಶನಿವಾರ ಇಲ್ಲಿ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು ಒಪ್ಪಿಗೆ ನೀಡಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ₹2,280.52 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಒಟ್ಟು 20 ಯೋಜನೆಗಳಿಗೆ ಅನುಮೋದನೆ ನೀಡಿದೆ. ಇದರಿಂದ ರಾಜ್ಯದಲ್ಲಿ 3,457 ಜನರಿಗೆ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.
ʼಸಮಿತಿಯು ಅನುಮೋದಿಸಿದ ಯೋಜನೆಗಳಲ್ಲಿ ಮುಂಬೈನ ಐಎಲ್‌ವಿ ಸೌತ್ ವೇರ್‌ಹೌಸಿಂಗ್ ಪಾರ್ಕ್ಸ್ ಪ್ರೈವೇಟ್ ಲಿಮಿಟೆಡ್‌ನ ₹423 ಕೋಟಿ ಮೊತ್ತದ ಕೈಗಾರಿಕಾ ಪಾರ್ಕ್, ಬೆಳಗಾವಿಯ ಮೃಣಾಲ್ ಷುಗರ್ಸ್ ಲಿಮಿಟೆಡ್ ಧಾರವಾಡ ಜಿಲ್ಲೆಯಲ್ಲಿ ₹386.86 ಕೋಟಿ ವೆಚ್ಚದ ಸಕ್ಕರೆ ಕಾರ್ಖಾನೆ ಸ್ಥಾಪನೆ, ಅಯೊಮಾ ಆಟೊಮೋಟಿವ್ ಫಾಸ್ಟನರ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ ತುಮಕೂರು ಜಿಲ್ಲೆಯ ವಸಂತನರಸಾಪುರದಲ್ಲಿ ₹ 210 ಕೋಟಿ ಮೊತ್ತದ ವಾಹನ ಬಿಡಿಭಾಗ ತಯಾರಿಕಾ ಘಟಕಗಳ ಸ್ಥಾಪನೆಯು ಪ್ರಮುಖವಾಗಿವೆ. ವೈಮಾಂತರಿಕ್ಷ ಜೋಡಣಾ ಘಟಕ, ಹಾಲು ಸಂಸ್ಕರಣಾ ಘಟಕಗಳೂ ಒಪ್ಪಿಗೆ ಪಡೆದ ಯೋಜನೆಗಳಲ್ಲಿ ಸೇರಿವೆ.
ರಾಮನಗರ, ಕೋಲಾರ, ಬೆಳಗಾವಿ, ತುಮಕೂರು, ಧಾರವಾಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಈ ಕೈಗಾರಿಕಾ ಘಟಕಗಳು ಅಸ್ತಿತ್ವಕ್ಕೆ ಬರಲಿವೆʼ ಎಂದು ಸಚಿವ ಪಾಟೀಲ ಅವರು ಮಾಹಿತಿ ನೀಡಿದ್ದಾರೆ.
₹50 ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆಯ 6 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ರಾಜ್ಯದಲ್ಲಿ ₹2025.71 ಕೋಟಿ ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ 2,440 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
₹15 ಕೋಟಿಗಳಿಂದ ₹50 ಕೋಟಿ ಮೊತ್ತದ ಒಳಗಿನ ಬಂಡವಾಳ ಹೂಡಿಕೆಯ 13 ಹೊಸ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇವುಗಳಿಂದ ₹ 214.81 ಕೋಟಿ ಮೊತ್ತದ ಬಂಡವಾಳ ಹೂಡಿಕೆಯೊಂದಿಗೆ 1017 ಜನರಿಗೆ ಉದ್ಯೋಗಗಳು ಲಭ್ಯವಾಗಲಿವೆ ಎಂದು ವಿವರಿಸಿದರು.
ಹೆಚ್ಚುವರಿ ಬಂಡವಾಳ ಹೂಡಿಕೆಯ 1 ಯೋಜನೆಗೆ ಸಭೆಯು ಅನುಮೋದಿಸಿದ್ದು ಇದರಿಂದ ₹40 ಕೋಟಿ ಬಂಡವಾಳ ಹೂಡಿಕೆ ಆಗಲಿದೆ.
ಮಡಿಕೇರಿ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
‘ಸಿದ್ದರಾಮಯ್ಯ’ ಅವರದು ಹೆದರುವ ರಕ್ತವಲ್ಲ, ಅದು ಅವರ ರಕ್ತದಲ್ಲಿಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್