ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಡಾಿದ್ದಾರೆ.
ಫ್ರೀಡಂಪಾರ್ಕ್ ನಲ್ಲಿ “ಮನರೇಗಾಬಚಾವೋ ಆಂದೋಲನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಅವರು, ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. ದುರುದ್ದೇಶದಿಂದ ಮನ್ ರೇಗಾ ಹೆಸರು ಬದಲಾವಣೆ ಮಾಡಿ ‘ವಿಬಿ ಜೀ ರಾಮ್ ಜೀ’ ಜಾರಿ ಮಾಡಿದ್ದಾರೆ ಎಂದರು.
ಮನ್ ರೇಗಾ ಯೋಜನೆಯಲ್ಲಿ ರಾಮ ಅನ್ನೋ ಹೆಸರು ಬರುವ ರೀತಿ ಯೋಜನೆ ಮಾಡಿದ್ದಾರೆ. ದಶರಥ ರಾಮ ಇಲ್ಲ ಕೌಶಲ್ಯ ರಾಮ ಇಲ್ಲ ಸೀತಾ ರಾಮ ಸಹ ಇಲ್ಲ. ಈ ಕಾಯ್ದೆಯಲ್ಲಿ ರಾಮ ಇಲ್ಲ. ಬಡವರು ದಲಿತರು, ರೈತರ ಬಗ್ಗೆ ಚಿಂತಿಸುವುದು ಕಾಂಗ್ರೆಸ್ ಮಾತ್ರ. ಬಡವರ ಬಗ್ಗೆ ಮಾತಾಡುವುದು ಕಾಂಗ್ರೆಸ್ ಮಾತ್ರ ಎಂದು ಹೇಳಿದರು.
RSS ಮಾರ್ಗದರ್ಶನದಂತೆ ಬಡವರ ಕಾರ್ಯಕ್ರಮಗಳನ್ನ ಬಿಜೆಪಿಯವರು ರದ್ದು ಮಾಡಿದ್ದಾರೆ. ಆರ್ ಎಸ್ ಎಸ್ ನವರಿಗೆ ಬಡವರು ಮುಖ್ಯವಾಹಿನಿಗೆ ಬರುವುದು ಬೇಕಾಗಿಲ್ಲ. ಬಡವರು ಬಡವರಾಗಿಯೇ ಉಳಿದು ಸದಾಕಾಲ ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ ಸಿದ್ಧಾಂತ ಎಂಬುದಾಗಿ ಕಿಡಿಕಾರಿದರು.
ಬಡವರ ವಿರೋಧಿ ಬಿಜೆಪಿ ಬಡವರ ಪರವಾದ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಗೊಳಿಸುತ್ತಿದೆ ಎಂದು ಸಿದ್ದರಾಮಯ್ಯ ಅವರು ಆಕ್ರೋಶ ಹೊರ ಹಾಕಿದರು.
ಜಾಗತಿಕವಾಗಿ 16,000 ಉದ್ಯೋಗಿಗಳನ್ನು ವಜಾಗೊಳಿಸಲು ಅಮೆಜಾನ್; ಭಾರತಕ್ಕೆ ತೀವ್ರ ಹಿನ್ನಡೆ
ರಾಜ್ಯದ ಗ್ರಾಮ ಪಂಚಾಯ್ತಿ ಕಚೇರಿಗಳಿಗೆ ‘ಮಹಾತ್ಮ ಗಾಂಧಿ’ ಹೆಸರಿಡಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ








