ಕಂಬಳಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು : ಕಂಬಳಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹವನ್ನು ನಮ್ಮ ಸರ್ಕಾರ ನೀಡುತ್ತಿದೆ. ಕೇಂದ್ರ ಸರ್ಕಾರ ಹಾಗೂ ಸರ್ವೋಚ್ಚ ನ್ಯಾಯಾಲಯಕ್ಕೆ ಪತ್ರ ಬರೆದಿರುವುದರಿಂದ ಕಂಬಳ ಉಳಿದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಂಬಳದ ಕುರಿತು ಯೋಜನೆ ರೂಪಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಕಗಳ ಜೊತೆಗೆ 10 ಸಾವಿರ ರೂ.ಗಳ ಗೌರವಧನ ನೀಡಲು ಸರ್ಕಾರ ಒಪ್ಪಿದೆ. ಒಂದು ವೇಳೆ 10 ಸಾವಿರಗಳಷ್ಟು ಪ್ರೋತ್ಸಾಹಕಗಳು ಬಾರದೆ ಹೋದರೆ ಸರ್ಕಾರವೇ … Continue reading ಕಂಬಳಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹ: ಮುಖ್ಯಮಂತ್ರಿ ಸಿದ್ದರಾಮಯ್ಯ