ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮೆಲ್ಲ ಅಭ್ಯರ್ಥಿಗಳ ಗೆಲುವು ಖಚಿತ: ಬಿ.ವೈ.ವಿಜಯೇಂದ್ರ

ಬೆಂಗಳೂರು: ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳೂ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಮ್ಮೆಲ್ಲ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸದಿಂದ ನುಡಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ನಮ್ಮ ಪಕ್ಷದ ಎಲ್ಲ ಹಿರಿಯ ಮುಖಂಡರು, ಜೆಡಿಎಸ್ ಪಕ್ಷದ ಸಮ್ಮುಖದಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಪರಿಷತ್‍ನಲ್ಲಿ ಅಪಾರ ಅನುಭವ ಇರುವ ನಮ್ಮ ಇಬ್ಬರು ಅಭ್ಯರ್ಥಿಗಳು ಮತ್ತೊಮ್ಮೆ ದೊಡ್ಡ ಅಂತರದಲ್ಲಿ ವಿಜಯಶಾಲಿಯಾಗಿ ಬರಲಿದ್ದಾರೆ ಎಂದು … Continue reading ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮೆಲ್ಲ ಅಭ್ಯರ್ಥಿಗಳ ಗೆಲುವು ಖಚಿತ: ಬಿ.ವೈ.ವಿಜಯೇಂದ್ರ