Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುವ ಬ್ಯಾಟರ್ `ವೈಭವ್ ಸೂರ್ಯವಂಶಿ’ ವಯಸ್ಸಿನ ಬಗ್ಗೆ ಗೊಂದಲ: ವಿಡಿಯೋ ವೈರಲ್ | WATCH VIDEO

07/04/2026 11:54 AM

ಗಡಿ ಜಿಲ್ಲೆ ಬೀದರನಲ್ಲಿ ಅರ್ಥಪೂರ್ಣವಾದ ಸಮ್ಮೇಳನ ಮಾಡಲು ಸರ್ವಸಿದ್ಧತೆ: ಶಿವಾನಂದ ತಗಡೂರು

07/04/2026 11:51 AM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ವ್ಯಂಗ್ಯಚಿತ್ರ ಪ್ರದರ್ಶನ ವ್ಯವಸ್ಥೆ

07/04/2026 11:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಡಿ ಜಿಲ್ಲೆ ಬೀದರನಲ್ಲಿ ಅರ್ಥಪೂರ್ಣವಾದ ಸಮ್ಮೇಳನ ಮಾಡಲು ಸರ್ವಸಿದ್ಧತೆ: ಶಿವಾನಂದ ತಗಡೂರು
KARNATAKA

ಗಡಿ ಜಿಲ್ಲೆ ಬೀದರನಲ್ಲಿ ಅರ್ಥಪೂರ್ಣವಾದ ಸಮ್ಮೇಳನ ಮಾಡಲು ಸರ್ವಸಿದ್ಧತೆ: ಶಿವಾನಂದ ತಗಡೂರು

By kannadanewsnow0507/04/2026 11:51 AM

ಬೀದರ: ಗಡಿ ಜಿಲ್ಲೆಯಾದ ಬೀದರನಲ್ಲಿಏ.11 ಮತ್ತು 12 ರಂದು ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಅರ್ಥಪೂರ್ಣವಾಗಿ ನಡೆಸಲು ಸರ್ವಸಿದ್ಧತೆ ನಡೆದಿದೆ ಎಂದುಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸಮ್ಮೇಳನದ ಮೆರವಣಿಗೆ, ವಸತಿ, ಸಾರಿಗೆ ಸೇರಿ ವಿವಿಧ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ರಾಜ್ಯದ ಎಲ್ಲ ಜಿಲ್ಲೆಗಳಿಂದ ಪತ್ರಕರ್ತರು ಬರಲಿದ್ದಾರೆ. ಪತ್ರಕರ್ತರಿಗೆ ವಸತಿ, ಆಹಾರ ಸೇರಿದಂತೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸಮ್ಮೇಳನ ಮಾದರಿಯಾಗಿ ಸಂಘಟಿಸಲು ತೀವ್ರಗತಿಯ ತಯಾರಿಗಳು ನಡೆದಿವೆ ಎಂದು ತಿಳಿಸಿದರು.

11 ರಂದು ಬೆಳಿಗ್ಗೆ 11ಕ್ಕೆ ಝೀರಾ ಕನ್ವೆನ್ಶನ್ ಹಾಲ್‍ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಜಿಲ್ಲೆಯ ಎಲ್ಲ ಶಾಸಕರು ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.

ಸಮ್ಮೇಳನದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಹಾಗೂ ಮಾಧ್ಯಮ, ಗಾಂಧಿ ಮತ್ತು ಅಂಬೇಡ್ಕರ್, ಎ.ಐ. ಮತ್ತು ಡಿಜಿಟಲ್ ಮಾಧ್ಯಮ ಸೇರಿ ನಾಲ್ಕು ಗೋಷ್ಠಿಗಳು ಜರುಗಲಿವೆ. ಸಂಘದ ಪ್ರಶಸ್ತಿಗಳ ಪ್ರದಾನವೂ ನಡೆಯಲಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಬೆಳಿಗ್ಗೆ 9ಕ್ಕೆ ಬಸವೇಶ್ವರ ವೃತ್ತದಿಂದ ಝೀರಾ ಕನ್ವೆನ್ಶನ್ ಹಾಲ್‍ವರೆಗೆ ಭವ್ಯ ಮೆರವಣಿಗೆ ನಡೆಸಲು ನಿರ್ಣಯಿಸಲಾಗಿದೆ. 40ನೇ ಸಮ್ಮೇಳನದ ಅಂಗವಾಗಿ ಮೆರವಣಿಗೆಯಲ್ಲಿ 40 ಬೃಹತ್ ಕೊಡೆಗಳು ಗಮನ ಸೆಳೆಯಲಿವೆ. ಬೈಲೂರು ನಿಷ್ಕಲ ಮಂಟಪದ ನಿಜಗುಣಪ್ರಭು ಸ್ವಾಮೀಜಿ ಹಾಗೂ ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸಾರಿಗೆ ಸಮಿತಿಯ ಪೋಸ್ಟರ್ ಬಿಡುಗಡೆ 

ಜಿಲ್ಲೆಯಲ್ಲಿ ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳು ಸಮ್ಮೇಳನ ಸಿದ್ಧತಾ ಕಾರ್ಯಗಳಲ್ಲಿ ನಿರತರಾಗಿದ್ದಾರೆ. ಸಮ್ಮೇಳನವನ್ನು ಸರ್ವ ರೀತಿಯಿಂದಲೂ ಯಶಸ್ವಿಗೊಳಿಸಲು ಶಕ್ತಿ ಮೀರಿ ಪ್ರಯತ್ನಿಸಲಾಗುತ್ತಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆನಂದ ದೇವಪ್ಪ ಮಾಹಿತಿ ನೀಡಿದರು.

ಜಿಲ್ಲಾ ಅಡಾಕ್ ಸಮಿತಿ ಸದಸ್ಯರಾದ ಅಪ್ಪಾರಾವ್ ಸೌದಿ, ಶಿವಕುಮಾರ ಸ್ವಾಮಿ, ಮೆರವಣಿಗೆ ಸಮಿತಿಯ ಪ್ರಧಾನ ಸಂಚಾಲಕ ಡಾ. ರಜನೀಶ್ ವಾಲಿ, ಸಂಚಾಲಕ ವಿಜಯಕುಮಾರ ಸೋನಾರೆ, ಸಹ ಸಂಚಾಲಕ ನಂದಕುಮಾರ ಕರಂಜೆ, ವಸತಿ ಸಮಿತಿಯ ಸಂಚಾಲಕ ಶ್ರೀಕಾಂತ ಪಾಟೀಲ, ಸಹ ಸಂಚಾಲಕ ಸಂತೋಷ್ ಚೆಟ್ಟಿ, ಸಾರಿಗೆ ಸಮಿತಿಯ ಪ್ರಧಾನ ಸಂಚಾಲಕ ಪೃಥ್ವಿರಾಜ್ ಎಸ್., ಸಂಚಾಲಕ ಸುನೀಲ್ ಕುಲಕರ್ಣಿ, ಛಾಯಾಚಿತ್ರ ಪ್ರದರ್ಶನ ಸಮಿತಿಯ ಪ್ರಧಾನ ಸಂಚಾಲಕ ಗೋಪಿಚಂದ್ ತಾಂದಳೆ, ಶಿಸ್ತು ಪಾಲನಾ ಹಾಗೂ ಸ್ವಯಂ ಸೇವಕರ ಸಮಿತಿಯ ಪ್ರಧಾನ ಸಂಚಾಲಕ ಎಂ.ಪಿ. ಮುದಾಳೆ, ಹಿರಿಯ ಪತ್ರಕರ್ತರಾದ ಅಶೋಕುಮಾರ ಕರಂಜಿ, ಬಸವರಾಜ ಕಾಮಶೆಟ್ಟಿ, ಅನಿಲ್ ಪಾಟೀಲ ಹಾಲಹಿಪ್ಪರ್ಗಾ, ಸಿದ್ರಾಮಯ್ಯ ಸ್ವಾಮಿ, ಹಾಜಿಪಾಶಾ, ಧಮೇಂದ್ರ ಪೂಜಾರಿ, ಮಾಣಿಕೇಶ್ ಪಾಟೀಲ, ಪ್ರವೀಣ್ ಮೇತ್ರೆ, ಸತೀಶ್ ತುಪ್ಪದ್ ಮತ್ತಿತರರು ಇದ್ದರು.

Share. Facebook Twitter LinkedIn WhatsApp Email

Related Posts

40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ವ್ಯಂಗ್ಯಚಿತ್ರ ಪ್ರದರ್ಶನ ವ್ಯವಸ್ಥೆ

07/04/2026 11:48 AM1 Min Read

ಮಹಿಳೆಯರೇ ಎಚ್ಚರ : ಈ ತಪ್ಪು ಮಾಡಿದ್ರೆ `ಪ್ರೆಶರ್ ಕುಕರ್’ ಸ್ಪೋಟಗೊಳ್ಳಬಹುದು.!

07/04/2026 11:45 AM2 Mins Read

ನಮ್ಮ ಅಣ್ಣ ಇಂದೇ ಸಿಎಂ ಆಗ್ತಾರೆ ಅಂತ ಹೇಳಿಲ್ಲ, ಆದರೆ ‘CM’ ಆಗುವ ಆಸೆ ಇದೇ : ಮಾಜಿ ಸಂಸದ ಡಿಕೆ ಸುರೇಶ್

07/04/2026 11:43 AM1 Min Read
Recent News

ಯುವ ಬ್ಯಾಟರ್ `ವೈಭವ್ ಸೂರ್ಯವಂಶಿ’ ವಯಸ್ಸಿನ ಬಗ್ಗೆ ಗೊಂದಲ: ವಿಡಿಯೋ ವೈರಲ್ | WATCH VIDEO

07/04/2026 11:54 AM

ಗಡಿ ಜಿಲ್ಲೆ ಬೀದರನಲ್ಲಿ ಅರ್ಥಪೂರ್ಣವಾದ ಸಮ್ಮೇಳನ ಮಾಡಲು ಸರ್ವಸಿದ್ಧತೆ: ಶಿವಾನಂದ ತಗಡೂರು

07/04/2026 11:51 AM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ವ್ಯಂಗ್ಯಚಿತ್ರ ಪ್ರದರ್ಶನ ವ್ಯವಸ್ಥೆ

07/04/2026 11:48 AM

ALERT : ಮೊಬೈಲ್ `ಅಪ್‌ ಡೇಟ್’ ಮಾಡುವ ಮುನ್ನ ಎಚ್ಚರ : ಸೈಬರ್ ಖದೀಮರಿಂದ ವ್ಯಾಪಾರಿಗೆ ₹2 ಲಕ್ಷ ವಂಚನೆ.!

07/04/2026 11:46 AM
State News
KARNATAKA

ಗಡಿ ಜಿಲ್ಲೆ ಬೀದರನಲ್ಲಿ ಅರ್ಥಪೂರ್ಣವಾದ ಸಮ್ಮೇಳನ ಮಾಡಲು ಸರ್ವಸಿದ್ಧತೆ: ಶಿವಾನಂದ ತಗಡೂರು

By kannadanewsnow0507/04/2026 11:51 AM KARNATAKA 2 Mins Read

ಬೀದರ: ಗಡಿ ಜಿಲ್ಲೆಯಾದ ಬೀದರನಲ್ಲಿಏ.11 ಮತ್ತು 12 ರಂದು ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ…

40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ವ್ಯಂಗ್ಯಚಿತ್ರ ಪ್ರದರ್ಶನ ವ್ಯವಸ್ಥೆ

07/04/2026 11:48 AM

ಮಹಿಳೆಯರೇ ಎಚ್ಚರ : ಈ ತಪ್ಪು ಮಾಡಿದ್ರೆ `ಪ್ರೆಶರ್ ಕುಕರ್’ ಸ್ಪೋಟಗೊಳ್ಳಬಹುದು.!

07/04/2026 11:45 AM

ನಮ್ಮ ಅಣ್ಣ ಇಂದೇ ಸಿಎಂ ಆಗ್ತಾರೆ ಅಂತ ಹೇಳಿಲ್ಲ, ಆದರೆ ‘CM’ ಆಗುವ ಆಸೆ ಇದೇ : ಮಾಜಿ ಸಂಸದ ಡಿಕೆ ಸುರೇಶ್

07/04/2026 11:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.