Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ
KARNATAKA

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಕೇಂದ್ರ ಸರ್ಕಾರದ ಸಾಲು ಸಾಲು ಅಭಿವೃದ್ಧಿ ಕೆಲಸಗಳು ಜನರನ್ನು ತಲುಪಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಹನ್ನೆರಡು ವರ್ಷಗಳ ಸುದೀರ್ಘ ಆಡಳಿತದಲ್ಲಿ ದೇಶದಾದ್ಯಂತ ಸರ್ವಾಂಗೀಣ ಅಭಿವೃದ್ದಿಯಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಶಾರದಾಂಬಾ ಕಲ್ಯಾಣ ಮಂಟಪದಲ್ಲಿ ಬಿಜೆಪಿ ನಗರ ಮಂಡಲದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರಬುದ್ಧರ ಜೊತೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಿ ಅವರು ಮಾತನಾಡಿದರು.

ಶಿವಮೊಗ್ಗ ಕ್ಷೇತ್ರಕ್ಕೂ ವಿಸ್ತರಿಸಿದ ಅಭಿವೃದ್ಧಿಯ ವೇಗ

ದೇಶವು ಇಂದು ಎಲ್ಲ ರಂಗಗಳಲ್ಲಿಯೂ ಅಭೂತಪೂರ್ವ ಯಶಸ್ಸು ಸಾಧಿಸುತ್ತಿದ್ದು, ಈ ಅಭಿವೃದ್ದಿಯ ವೇಗ ನಮ್ಮ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೂ ವಿಸ್ತರಿಸಿದೆ ಎಂದು ಸಂಸದರು ಹೆಮ್ಮೆಯಿಂದ ನುಡಿದರು. ವಿಶೇಷವಾಗಿ ಸಾಗರ ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಸಿಗಂದೂರು ಸೇತುವೆ ನಿರ್ಮಾಣವು ಈ ಭಾಗದ ಐತಿಹಾಸಿಕ ಅಭಿವೃದ್ದಿ ಕೆಲಸವಾಗಿದೆ. ಸಾಗರದ ತ್ಯಾಗರ್ತಿ ವೃತ್ತದಿಂದ ಎಲ್.ಬಿ.ಕಾಲೇಜುವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಸುಮಾರು ಎಪ್ಪತ್ತೈದು ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಇದರೊಂದಿಗೆ ತಾಳಗುಪ್ಪ, ಆನಂದಪುರ ಹಾಗೂ ಸಾಗರ ರೈಲ್ವೆ ನಿಲ್ದಾಣಗಳ ಆಧುನೀಕರಣ ಮತ್ತು ಅಭಿವೃದ್ದಿಗೆ ನೂರು ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ ಎಂದು ಅಭಿವೃದ್ಧಿ ಕಾರ್ಯಗಳ ಪಟ್ಟಿಯನ್ನು ಹಂಚಿಕೊಂಡರು.

ಜೋಗ ಅಭಿವೃದ್ಧಿ ಯೋಜನೆಗೆ ಯಡಿಯೂರಪ್ಪ ಅವರೇ ರೂವಾರಿ

ವಿಶ್ವವಿಖ್ಯಾತ ಜೋಗ ಜಲಪಾತದ ಆವರಣದಲ್ಲಿ ಈಗ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಆ ಕೆಲಸಗಳ ಬಗ್ಗೆ ಯಾರೇ ಫ್ಲೆಕ್ಸ್ ಹಾಕಿಕೊಂಡರೂ, ಆ ಬೃಹತ್ ಯೋಜನೆಗೆ ಮೂಲ ಮಂಜೂರಾತಿ ನೀಡಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎನ್ನುವುದನ್ನು ಯಾರೂ ಮರೆಯುವಂತಿಲ್ಲ ಎಂದು ಸಂಸದರು ಮಾರ್ಮಿಕವಾಗಿ ನುಡಿದರು. ಇದೇ ವೇಳೆ ಕ್ಷೇತ್ರಕ್ಕೆ ನೂರು ಬಿ.ಎಸ್.ಎನ್.ಎಲ್. ಟವರ್‌ಗಳು ಮಂಜೂರಾಗಿದ್ದು, ತಲಾ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಎಂಬತ್ತು ಗ್ರಾಮೀಣ ಪ್ರದೇಶಗಳಿಗೆ ಹಾಗೂ ಇಪ್ಪತ್ತು ನಗರ ಪ್ರದೇಶಗಳಿಗೆ ಈ ಟವರ್‌ಗಳನ್ನು ಹಂಚಿಕೆ ಮಾಡಲಾಗಿದ್ದು, ಸದ್ಯ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಎರಡು ಸಾವಿರದ ನಲವತ್ತೇಳರ ವಿಕಸಿತ ಭಾರತದ ದೂರದೃಷ್ಟಿಯ ಪರಿಕಲ್ಪನೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪವನ್ನು ಅನುಷ್ಠಾನಗೊಳಿಸಲು ನಾವೆಲ್ಲರೂ ಕಟಿಬದ್ಧರಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.

ಸಂಸದರ ಕಾಳಜಿಯಿಂದ ಸಾಗರಕ್ಕೆ ದೊಡ್ಡ ಯೋಜನೆಗಳು

ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು, ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಸಂಸದರು ಹೆಚ್ಚಿನ ಅಭಿವೃದ್ದಿ ಕೆಲಸಗಳಿಗೆ ಚಾಲನೆ ನೀಡಿದ್ದಾರೆ. ಅದರಲ್ಲೂ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೆ ಕ್ಷೇತ್ರಕ್ಕೆ ವಿಶೇಷ ಆದ್ಯತೆ ಸಿಕ್ಕಿದೆ ಎಂದರು. ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಸಂಸದರ ವಿಶೇಷ ಕಾಳಜಿಯಿಂದಾಗಿ, ಯಡಿಯೂರಪ್ಪ ಅವರ ಮೇಲೆ ಒತ್ತಡ ತಂದು ಜೋಗ ಜಲಪಾತ ಅಭಿವೃದ್ಧಿ ಯೋಜನೆ ಮಂಜೂರು ಮಾಡಿಸಲಾಗಿತ್ತು. ಸಿಗಂದೂರು ಸೇತುವೆ ಸಹ ಯಡಿಯೂರಪ್ಪ ಹಾಗೂ ಬಿ.ವೈ.ರಾಘವೇಂದ್ರ ಅವರ ಜಂಟಿ ಶ್ರಮದಿಂದಾಗಿ ಮಂಜೂರಾಗಿದೆ. ಇದಲ್ಲದೆ ನಾನು ಶಾಸಕನಾಗಿದ್ದ ಅವಧಿಯಲ್ಲಿ ಸ್ಥಳೀಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಅಭಿವೃದ್ದಿಗೂ ವಿಶೇಷ ಆದ್ಯತೆ ನೀಡಲಾಗಿತ್ತು ಎಂದು ನೆನಪಿಸಿಕೊಂಡರು.

ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿ

ವೇದಿಕೆಯಲ್ಲಿ ಪ್ರಮುಖರಾದ ಕೆ.ಆರ್.ಗಣೇಶಪ್ರಸಾದ್, ಹಕ್ರೆ ಮಲ್ಲಿಕಾರ್ಜುನ, ದೇವೇಂದ್ರಪ್ಪ, ವಿ.ಮಹೇಶ್, ಆರ್.ಶ್ರೀನಿವಾಸ್, ಮೈತ್ರಿ ಪಾಟೀಲ್, ಮಧುರಾ ಶಿವಾನಂದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಗುರುಪ್ರಸಾದ್ ಸ್ವಾಗತಿಸಿದರು, ಟಿ.ಡಿ.ಮೇಘರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು ಹಾಗೂ ಪರಶುರಾಮ ಕಾರ್ಯಕ್ರಮ ನಿರೂಪಿಸಿದರು.

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

Share. Facebook Twitter LinkedIn WhatsApp Email

Related Posts

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

2 Mins Read

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

2 Mins Read

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

1 Min Read
Recent News

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

State News
KARNATAKA

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಕೇಂದ್ರ ಸರ್ಕಾರದ ಸಾಲು ಸಾಲು ಅಭಿವೃದ್ಧಿ ಕೆಲಸಗಳು ಜನರನ್ನು ತಲುಪಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಹನ್ನೆರಡು ವರ್ಷಗಳ…

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.