ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ.
ಧರ್ಮಸ್ಥಳದಲ್ಲಿ ಮಾತನಾಡಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಈಗ ಒಂದೊಂದೇ ಸತ್ಯಗಳು ಹೊರ ಬರುತ್ತಿವೆ. ಇದರ ಬಗ್ಗೆ ನಾನು ಈಗ ಹೆಚ್ಚೇನೂ ಮಾತನಾಡುವುದಿಲ್ಲ. ಎಲ್ಲಾ ಆರೋಪಗಳು ತೊಳೆದು ಹೋದಂತಾಗಿದೆ ಎಂದು ತಿಳಿಸಿದ್ದಾರೆ. ತನಿಖೆಯಿಂದ ಇನ್ನೂ ಎಲ್ಲಾ ವಿಚಾರಗಳು ಗೊತ್ತಾಗಲಿವೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಹೀಗೇಯೇ ಇರಲಿ ಎಂದು ಹೇಳಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು SIT ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆ ಬಳಿಕ ಬೆಳ್ತಂಗಡಿ ಸಿವಿಲ್ ಮತ್ತು JMFC ಕೋರ್ಟ್ ಗೆ ಹಾಜರುಡಿಸಿದ್ದರು. ವಿಚಾರಣೆ ನಡೆಸಿದ ಜಡ್ಜ್ ವಿಜಯೇಂದ್ರ ಅವರು 10 ದಿನಗಳ ಕಾಲ ಚಿನ್ನಯ್ಯನನ್ನು SIT ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.