ಬೆಂಗಳೂರು: ವಾಂಟೆಂಡ್ ಕ್ರಿಮಿನಲ್ಗಳೆಲ್ಲ ಈಗ ಬಿಜೆಪಿಗೆ ( BJP ) ವಾಂಟೆಂಡ್! ರೌಡಿ ಶೀಟರ್ಗಳನ್ನು ಪಕ್ಕದಲ್ಲಿಟ್ಟುಕೊಳ್ಳುವ ಹಾಗೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ. ಬಿಜೆಪಿ ಈಗ ಮತ್ತೊಬ್ಬ ರೌಡಿ ಫೈಟರ್ ರವಿ ಎಂಬಾತನನ್ನು ಪಕ್ಷಕ್ಕೆ ಸೇರಿಸಿಕೊಂಡ ಸಂಸ್ಕೃತಿ ಪಾಲನೆಗೆ ಮುಂದಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ( Karnataka Congress ), ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದೆ.
ವಾಂಟೆಂಡ್ ಕ್ರಿಮಿನಲ್ಗಳೆಲ್ಲ ಈಗ ಬಿಜೆಪಿಗೆ ವಾಂಟೆಂಡ್!
ರೌಡಿ ಶೀಟರ್ಗಳನ್ನು ಪಕ್ಕದಲ್ಲಿಟ್ಟುಕೊಳ್ಳುವ ಹಾಗೂ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ @BJP4Karnataka ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ.
ಬಿಜೆಪಿ ಈಗ ಮತ್ತೊಬ್ಬ ರೌಡಿ ಫೈಟರ್ ರವಿ ಎಂಬಾತನನ್ನು ಪಕ್ಷಕ್ಕೆ ಸೇರಿಸಿಕೊಂಡ ಸಂಸ್ಕೃತಿ ಪಾಲನೆಗೆ ಮುಂದಾಗಿದೆ! pic.twitter.com/aUtfFTrsxN
— Karnataka Congress (@INCKarnataka) November 28, 2022
ಈ ಬಗ್ಗೆ ಟ್ವಿಟ್ ಮಾಡಿದ್ದು, ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್ ಸುನಿಲ್ ಎಂಬ ರೌಡಿಯ ಮುಂದೆ ಈಗ ಪೊಲೀಸರೇ ( Karnataka Police ) ಸೈಲೆಂಟ್! ಅರಗ ಜ್ಞಾನೇಂದ್ರ ( Araga Jnanendra ) ಅವರೇ, ಸೈಲೆಂಟ್ ಸುನಿಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ? ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರೀರಲಿಲ್ಲವೇ? ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಎಂದು ಕೇಳಿದೆ.
ಬಿಜೆಪಿಯ ಕೃಪಾಕಟಾಕ್ಷದಿಂದ
ಸೈಲೆಂಟ್ ಸುನಿಲ್ ಎಂಬ ರೌಡಿಯ ಮುಂದೆ ಈಗ ಪೊಲೀಸರೇ ಸೈಲೆಂಟ್!@JnanendraAraga ಅವರೇ, ಸೈಲೆಂಟ್ ಸುನಿಲನಿಗೆ ಪೊಲೀಸರು ಹುಡುಕುತ್ತಿರಲಿಲ್ಲವೇ?ಬಿಜೆಪಿ ನಾಯಕರೊಂದಿಗೆ ವೇದಿಕೆಯಲ್ಲಿದ್ದಾಗ ಅಲ್ಲಿ ಪೊಲೀಸರೀರಲಿಲ್ಲವೇ?
ಬಂಧಿಸದಂತೆ ಪೊಲೀಸರಿಗೆ ತಡೆದವರು ಯಾರು?
ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? pic.twitter.com/LLAaVXicux— Karnataka Congress (@INCKarnataka) November 28, 2022
ಕ್ರಿಮಿನಲ್ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ? ಅರಗ ಜ್ಞಾನೇಂದ್ರ ಅವರೇ, ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ? ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ ಬಿಜೆಪಿ ನಾಯಕರ ( BJP Leader ) ಕೈಗೆ ಸಿಕ್ಕಿದ್ದು ಹೇಗೆ? ಎಂದು ಪ್ರಶ್ನಿಸಿದೆ.
ಕ್ರಿಮಿನಲ್ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ?@JnanendraAraga ಅವರೇ, ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ?
ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ @BJP4Karnataka ನಾಯಕರ ಕೈಗೆ ಸಿಕ್ಕಿದ್ದು ಹೇಗೆ?
— Karnataka Congress (@INCKarnataka) November 28, 2022
ವಾಂಟೆಡ್ ಲಿಸ್ಟ್ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ! ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು – ಬಿಜೆಪಿ. ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ ಬಿಜೆಪಿ ? ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ? ಎಂದಿದೆ.
ವಾಂಟೆಡ್ ಲಿಸ್ಟ್ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ!
ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು – ಬಿಜೆಪಿ.
ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ @BJP4Karnataka?
ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ?— Karnataka Congress (@INCKarnataka) November 28, 2022