ಬೆಂಗಳೂರು:ರಾಜ್ಯಸಭೆ ಚುನಾವಣೆಯ ಫಲಿತಾಂಶದ ಗೆದ್ದ ಅಭ್ಯರ್ಥಿ ನಾಸಿರ್ ಹುಸೇನ್ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ಅವರ ಹಿಂದೆ ಇದ್ದವರೊಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ತಿಳಿಸಿದ್ದಾರೆ.
ರಾಜ್ಯಸಭೆ ಚುನಾವಣೆ ಗೆಲುವು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ:ಸ್ಪಷ್ಟನೆ ನೀಡಿದ ಸಯ್ಯದ್ ನಾಸೀರ್ ಹುಸೇನ್
ವಿಜೇತ ಅಭ್ಯರ್ಥಿ ನಾಸಿರ್ ಹುಸೇನ್ ಜೊತೆ ಯಾರ್ಯಾರು ಬಂದಿದ್ದರು ಎಂದು ಪೋಲಿಸರು ಲೀಸ್ಟ್ ಮಾಡುತ್ತಿದ್ದಾರೆ, ವೀಡಿಯೋದ ನೈಜತೆ ಬಗ್ಗೆ ಪೋಲಿಸರು ಕೂಲಂಕಷವಾಗಿ ತನಿಖೆ ಮಾಡುತ್ತಿದ್ದಾರೆ.ನಾಸಿರ್ ಹುಸೇನ್ ಜೊತೆ ಇದ್ದವರನ್ನು ಇಂದು ಪೋಲಿಸರು ಕರೆಸಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಆರೋಪಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿನ ವಿಡಿಯೋ ತುಣುಕುಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ವಾಸ್ತವಾಂಶ ತಿಳಿಯುವುದಕ್ಕಾಗಿ ಅವುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ತಯಾರಿ ಮಾಡಲಾಗುತ್ತಿದೆ.