Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಮೆದುಳಿನ ಜೀವಕೋಶಗಳ ಪುನರುಜ್ಜೀವನಕ್ಕೆ ವಿಟಮಿನ್ K ಆಧಾರಿತ ಹೊಸ ಸಂಯುಕ್ತಗಳ ಆವಿಷ್ಕಾರ!

Watch video: ಅಹ್ವಾನವಿಲ್ಲದೆ ಮದುವೆಗೆ ಬಂದು 10 ರೂಪಾಯಿ ಕಾಣಿಕೆ ನೀಡಿದ ವ್ಯಕ್ತಿ: ಅಸ್ಸಾಂನ ಈ ಹೃದಯಸ್ಪರ್ಶಿ ವಿಡಿಯೋ ವೈರಲ್!

QR Code Scam: ನಕಲಿ QR ಕೋಡ್ ಸ್ಕ್ಯಾನ್ ಮಾಡಿ ಹಣ ಕಳೆದುಕೊಂಡ್ರಾ? ಹೀಗೆ ಮಾಡಿದರೆ ನಿಮ್ಮ ಹಣ ವಾಪಸ್ ಸಿಗುತ್ತೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿಯಮಾನುಸಾರ ‘ಕೈಗಾರಿಕಾ CA ನಿವೇಶನ’ಗಳ ಹಂಚಿಕೆ: ಸಚಿವ ಎಂ.ಬಿ ಪಾಟೀಲ
KARNATAKA

ನಿಯಮಾನುಸಾರ ‘ಕೈಗಾರಿಕಾ CA ನಿವೇಶನ’ಗಳ ಹಂಚಿಕೆ: ಸಚಿವ ಎಂ.ಬಿ ಪಾಟೀಲ

By ವಸಂತ ಬಿ ಈಶ್ವರಗೆರೆ

ಬೆಳಗಾವಿ ಸುವರ್ಣಸೌಧ: ಕೈಗಾರಿಕಾ ಪ್ರದೇಶಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯ ಉದ್ದೇಶಗಳಿಗೆಂದು ಮೀಸಲಿಟ್ಟಿರುವ ಸಿ.ಎ. ನಿವೇಶನಗಳನ್ನು ಪಾರದರ್ಶಕವಾಗಿ ಮತ್ತು ನಿಯಮಗಳಿಗೆ ಅನುಸಾರವಾಗಿ ಹಂಚಲಾಗುತ್ತಿದೆ. ಜೊತೆಗೆ ಇದರಲ್ಲಿ ಎಸ್ಸಿ-ಎಸ್ಟಿ ಸಮುದಾಯಗಳ ಅರ್ಹರಿಗೂ ಅವಕಾಶ ಸಿಗಬೇಕೆಂದು ಮೀಸಲಾತಿಯನ್ನು ಕಡ್ಡಾಯಗೊಳಿಸಲಾಗಿದೆ. ಇದರಲ್ಲಿ ಸ್ವಜನ ಪಕ್ಷಪಾತವಾಗಲಿ, ಅಕ್ರಮವಾಗಲಿ ಏನೂ ನಡೆದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಇಲ್ಲಿ ಸ್ಪಷ್ಟಪಡಿಸಿದರು.

ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಸಿ.ಟಿ.ರವಿ ಅವರು ಕೇಳಿದ ಪ್ರಶ್ನೆಗೆ ಅವರು ವಿವರವಾದ ಉತ್ತರ ನೀಡಿದರು.

ಕೈಗಾರಿಕಾ ಪ್ರದೇಶಗಳಲ್ಲಿ ಶಾಲೆ, ಆಸ್ಪತ್ರೆ, ವಸತಿ ಸಮುಚ್ಚಯಗಳು, ಬ್ಯಾಂಕು, ಪೆಟ್ರೋಲ್ ಬಂಕ್, ಕ್ಯಾಂಟೀನ್, ಸಮುದಾಯ ಭವನ, ಆರ್ & ಡಿ ಮತ್ತು ನಾವೀನ್ಯತಾ ಕೇಂದ್ರಗಳು ಇತ್ಯಾದಿ ಉದ್ದೇಶಗಳಿಗೆಂದು ಸಿ.ಎ. ನಿವೇಶನಗಳನ್ನು ಇಟ್ಟುಕೊಳ್ಳಲಾಗಿದೆ. ಹೋಟೆಲುಗಳು ಕೂಡ ಇದರಡಿಯಲ್ಲಿಯೇ ಬರುತ್ತವೆ. ಆದರೆ, ಒಬ್ಬರಿಗೆ ಒಂದೇ ಸಿ.ಎ. ನಿವೇಶನವನ್ನು ಮಾತ್ರ ಕೊಡಬೇಕೆಂಬ ನಿರ್ಬಂಧ ಕೂಡ ಇಲ್ಲ. ಅರ್ಹ ಸಂಸ್ಥೆಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಈ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿ ಸರಿಯಾಗಿ ಜಾಹೀರಾತು ನೀಡಿಲ್ಲ ಎನ್ನುವ ಸಿ.ಟಿ. ರವಿ ಅವರ ಆಕ್ಷೇಪಣೆಗೆ ಉತ್ತರಿಸಿದ ಪಾಟೀಲರು, `ಮುಖ್ಯ ವಾಹಿನಿಯ ರಾಜ್ಯ ಪತ್ರಿಕೆಗಳ ಜತೆಗೆ ನಾನು ಸಚಿವನಾದ ಮೇಲೆ ಆನ್ ಲೈನ್ ಮೂಲಕವೂ ಜಾಹೀರಾತು ನೀಡುವ ವ್ಯವಸ್ಥೆಯನ್ನು ಜಾರಿಗೆ ತಂದಿದ್ದೇನೆ. ಹೀಗೆ ಒಟ್ಟು 93 ಕಡೆಗೆ ಜಾಹೀರಾತು ನೀಡಲಾಗಿತ್ತು. 42 ಸಿ.ಎ. ನಿವೇಶನಗಳಿಗೆ ಒಂದೊಂದೇ ಅರ್ಜಿ ಬಂದಿದ್ದವು. ಇವುಗಳನ್ನು ತಿರಸ್ಕರಿಸಲಾಗಿದೆ. ಎರಡು ಸಿ.ಎ. ನಿವೇಶನಗಳನ್ನು ಉದ್ಯಮಿಗಳು ಸರಕಾರಕ್ಕೆ ಹಿಂದಿರುಗಿಸಿದ್ದಾರೆ. ಇನ್ನೂ 39 ನಿವೇಶನಗಳು ಹಾಗೆಯೇ ಉಳಿದಿವೆ’ ಎಂದು ವಿವರಿಸಿದರು.

ಹಿಂದೆಲ್ಲ ಕೈಗಾರಿಕಾ ಸಚಿವರೇ ಈ ನಿವೇಶನಗಳ ಹಂಚಿಕೆ ಸಂಬಂಧ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಿದ್ದರು. ಆದರೆ, ನಾನು ಸಚಿವನಾಗಿ ಬಂದ ಮೇಲೆ ಇದಕ್ಕಾಗಿ ಕೆಐಎಡಿಬಿ ಸಿಇಒ ನೇತೃತ್ವದ ಉನ್ನತ ಸಮಿತಿಯನ್ನು ರಚಿಸಿದ್ದೇನೆ. ಒಟ್ಟು 95 ಎಕರೆಯಷ್ಟು ಜಾಗದಲ್ಲಿ ಇನ್ನೂ 152 ನಿವೇಶನಗಳಿವೆ. ಹಿಂದಿನ ಬಿಜೆಪಿ ಸರಕಾರವು ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕಿಗೆ ಸೇರಿದ ಜಾಗದಲ್ಲಿ ಒಂದು ಶಿಕ್ಷಣ ಸಂಸ್ಥೆಗೆ ಜಮೀನು ಕೊಟ್ಟಿದ್ದರಿಂದ ಬೊಕ್ಕಸಕ್ಕೆ 135 ಕೋಟಿ ರೂ. ನಷ್ಟವಾಗಿದೆ. ಇಂತಹ ಹಂಚಿಕೆಗಳಲ್ಲಿ ಪ್ರತಿಪಕ್ಷದವರು ರಾಜಕೀಯ ಮಾಡಲು ನೋಡಿದರೆ, ನಮಗೂ ರಾಜಕೀಯ ಮಾಡಲು ಬರುತ್ತದೆ ಎಂದು ಅವರು ತಿರುಗೇಟು ನೀಡಿದರು.

ರೈತರಿಗೆ ನೇರ ಪಾವತಿ

ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಎಂ ಬಿ ಪಾಟೀಲ, `ಕೈಗಾರಿಕೋದ್ದೇಶಕ್ಕೆ ಜಮೀನನ್ನು ವಶಪಡಿಸಿಕೊಂಡ ಸಂದರ್ಭದಲ್ಲಿ ಆಯಾ ಪ್ರದೇಶದ ಮಾರ್ಗಸೂಚಿ ಬೆಲೆ ಆಧರಿಸಿ ರೈತರಿಗೆ ಆರ್ ಟಿಜಿಎಸ್ ಮೂಲಕ ನೇರವಾಗಿ ಪರಿಹಾರ ಪಾವತಿಸಲಾಗುತ್ತಿದೆ. ಮಧ್ಯವರ್ತಿಗಳು, ಜಿಪಿಎ ಹೊಂದಿರುವವರಿಗೆ ಹಣ ವರ್ಗಾಯಿಸುವ ವ್ಯವಸ್ಥೆ ಇಲ್ಲ. ನಿಯಮಗಳ ಪ್ರಕಾರ ರೈತರು ಮತ್ತು ಉದ್ಯಮಿಗಳ ಜಂಟಿ ಸಹಭಾಗಿತ್ವಕ್ಕೆ ಅವಕಾಶವಿಲ್ಲ. ಪರಿಹಾರ ಬೇಡ ಎನ್ನುವವರಿಗೆ ಅಭಿವೃದ್ಧಿಪಡಿಸಿದ ನಿವೇಶನ ನೀಡುವುದಕ್ಕೆ ನಿಯಮಗಳಲ್ಲಿ ಅವಕಾಶ ಇದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

2ನೇ ವಿಮಾನ ನಿಲ್ದಾಣ: ಸದ್ಯದಲ್ಲೇ ಪ್ರಸ್ತಾವನೆ ಸಲ್ಲಿಕೆ

ಜೆಡಿಎಸ್ ಸದಸ್ಯ ಟಿ ಎನ್ ಜವರಾಯಿಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವ ಪಾಟೀಲ ಅವರು, `ಬೆಂಗಳೂರಿನ ಜನರು ಮತ್ತು ಉದ್ಯಮಿಗಳ ಒಳಿತಿಗಾಗಿ 2ನೇ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ 3-4 ಸ್ಥಳಗಳು ಸರಕಾರದ ಮುಂದಿವೆ. ಐಡೆಕ್ ಸಂಸ್ಥೆ ಅಧ್ಯಯನ ನಡೆಸುತ್ತಿದೆ. ಇನ್ನೊಂದು ವಾರದಲ್ಲಿ ಇದರ ಚಿತ್ರಣ ಸಿಗಲಿದೆ. ನಂತರ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಆ ಸಂಸ್ಥೆಯು ಸ್ಥಳವನ್ನು ಆಖೈರು ಮಾಡುತ್ತದೆ. ಇದರಲ್ಲಿ ನನಗೇನೂ ಅಧಿಕಾರವಿಲ್ಲ’ ಎಂದರು.

ಸ್ಥಳ ಆಖೈರಾದ ಮೇಲಷ್ಟೆ ಭೂ ಸ್ವಾಧೀನ ಪ್ರಕ್ರಿಯೆ ಶುರುವಾಗಲಿದೆ. ಯಾವ ಜಾಗ ಅಂತಿಮವಾಗುತ್ತದೋ ಅಲ್ಲಿರುವ ಮಾರ್ಗಸೂಚಿ ದರದ ಪ್ರಕಾರ, ಜಮೀನು ಕಳೆದುಕೊಳ್ಳಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು. ಪ್ರಯಾಣಿಕರ ದಟ್ಟಣೆ, ಕೈಗಾರಿಕಾ ಸಾಗಾಣಿಕೆ, ಸ್ಥಳದ ಭೌಗೋಳಿಕ ಲಕ್ಷಣ ಇತ್ಯಾದಿಗಳನ್ನು ಪರಿಗಣಿಸಿ, ವಿಮಾನ ನಿಲ್ದಾಣ ಪ್ರಾಧಿಕಾರವು ಸ್ಥಳವನ್ನು ಪರಿಶೀಲಿಸಿ, ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಪಾಟೀಲ ತಿಳಿಸಿದ್ದಾರೆ.

BREAKING : ವೃಕ್ಷಮಾತೆ ‘ತುಳಸಿಗೌಡ’ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪ್ರಧಾನಿ ಮೋದಿ | PM Modi

ನೈಋತ್ಯ ರೈಲ್ವೆಯ ನಾಲ್ವರು ಉದ್ಯೋಗಿಗಳಿಗೆ ಅತಿ ವಿಶಿಷ್ಟ ರೈಲು ಸೇವಾ ಪುರಸ್ಕಾರ

Share. Facebook Twitter LinkedIn WhatsApp Email

Related Posts

ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ: ಕುರಿಗಾಯಿಯಿಂದ ಸಿಎಂ ಪಟ್ಟದವರೆಗಿನ ಸ್ಫೂರ್ತಿದಾಯಕ ಪಯಣ

2 Mins Read

ಶಿವಮೊಗ್ಗ: ಮೇ.30ರಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

1 Min Read

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ಬಿಗ್ ರಿಲೀಫ್: ವಿದೇಶ ಪ್ರವಾಸಕ್ಕೆ ಅನುಮತಿ

1 Min Read
Recent News

​ಮೆದುಳಿನ ಜೀವಕೋಶಗಳ ಪುನರುಜ್ಜೀವನಕ್ಕೆ ವಿಟಮಿನ್ K ಆಧಾರಿತ ಹೊಸ ಸಂಯುಕ್ತಗಳ ಆವಿಷ್ಕಾರ!

Watch video: ಅಹ್ವಾನವಿಲ್ಲದೆ ಮದುವೆಗೆ ಬಂದು 10 ರೂಪಾಯಿ ಕಾಣಿಕೆ ನೀಡಿದ ವ್ಯಕ್ತಿ: ಅಸ್ಸಾಂನ ಈ ಹೃದಯಸ್ಪರ್ಶಿ ವಿಡಿಯೋ ವೈರಲ್!

QR Code Scam: ನಕಲಿ QR ಕೋಡ್ ಸ್ಕ್ಯಾನ್ ಮಾಡಿ ಹಣ ಕಳೆದುಕೊಂಡ್ರಾ? ಹೀಗೆ ಮಾಡಿದರೆ ನಿಮ್ಮ ಹಣ ವಾಪಸ್ ಸಿಗುತ್ತೆ!

20 ವರ್ಷಗಳ ಬಳಿಕ ಮತ್ತೆ ಜಪಾನ್‌ನಿಂದ ಭಾರತೀಯ ಮಾವಿನ ಹಣ್ಣುಗಳ ಆಮದಿಗೆ ತಡೆ: ಕಾರಣವೇನು?

State News
KARNATAKA

ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ: ಕುರಿಗಾಯಿಯಿಂದ ಸಿಎಂ ಪಟ್ಟದವರೆಗಿನ ಸ್ಫೂರ್ತಿದಾಯಕ ಪಯಣ

By ಗೋಪಾಲ್‌ ಎನ್‌ KARNATAKA 2 Mins Read

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ (ಮೇ 28, 2026) ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಉಪ…

ಶಿವಮೊಗ್ಗ: ಮೇ.30ರಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ಬಿಗ್ ರಿಲೀಫ್: ವಿದೇಶ ಪ್ರವಾಸಕ್ಕೆ ಅನುಮತಿ

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.