Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸುವೇಂದು ಅಧಿಕಾರಿ ಪಿಎ ಹತ್ಯೆಗೆ ಭೀಕರ ಸ್ಕೆಚ್: ಎಸ್‌ಯುವಿ ಮೂಲಕ ಅಡ್ಡಗಟ್ಟಿ, ಬೈಕ್‌ನಲ್ಲಿ ಬಂದು ಗುಂಡಿನ ಸುರಿಮಳೆ! ಹೇಗಿತ್ತು ಗೊತ್ತಾ ಪ್ಲಾನ್?

ಮದ್ದೂರು ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಟ್ರಸ್ಟ್ ಮೂಲಕ ಸಮಾಜ ಮುಖಿ ಕೆಲಸ ಶ್ಲಾಘನೀಯ: ಡಿಸಿಎಂ ಡಿ.ಕೆ.ಶಿವಕುಮಾರ್

ಹೊಸ ರೂಪದ ಜನಗಣತಿ: ಮನೆ-ಮನೆ ಸಮೀಕ್ಷೆಯಲ್ಲಿ ಲಿವ್-ಇನ್ ಸಂಬಂಧಗಳಿಗೂ ಸಿಗಲಿದ್ಯಾ ಮನ್ನಣೆ?!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದ್ದೂರು ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಟ್ರಸ್ಟ್ ಮೂಲಕ ಸಮಾಜ ಮುಖಿ ಕೆಲಸ ಶ್ಲಾಘನೀಯ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ಮದ್ದೂರು ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಟ್ರಸ್ಟ್ ಮೂಲಕ ಸಮಾಜ ಮುಖಿ ಕೆಲಸ ಶ್ಲಾಘನೀಯ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow09

ಮಂಡ್ಯ : ಮದ್ದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿ ಜತೆಗೆ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರದಲ್ಲಿ ಮದ್ದೂರು ಉತ್ಸವ ಹಮ್ಮಿಕೊಂಡು ಇತಿಹಾಸ ಸೃಷ್ಠಿ ಮಾಡಿರುವುದು ಮೆಚ್ಚುಗೆಯ ಸಂಗತಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶಂಸೆ ವ್ಯಕ್ತಪಡಿಸಿದರು.

ಮದ್ದೂರು ನಗರದ ತಾಲೂಕು ಕ್ರೀಡಾಂಗಣದಲ್ಲಿ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಗ್ರಾಮದೇವತೆ ಶ್ರೀ ಮದ್ದೂರಮ್ಮ ಜಾತ್ರಾ ಮಹೋತ್ಸವ ಹಾಗೂ ಶ್ರೀ ಉಗ್ರ ನರಸಿಂಹ ಸ್ವಾಮಿಯ ಬ್ರಹ್ಮೋತ್ಸವದ ಅಂಗವಾಗಿ ಬುಧವಾರ ಆಯೋಜಿಸಿದ್ದ ಮದ್ದೂರು ಉತ್ಸವ – 2026 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಗರದಲ್ಲಿ ಮಾಡಿರುವ ವಿದ್ಯುತ್ ದೀಪಾಲಂಕಾರನ್ನು ನೋಡಿದರೆ ಮೈಸೂರು ದಸರಾವನ್ನು ಜ್ಞಾಪಿಸುವಂತೆ ಮಾಡಿರುವುದು ಖುಷಿ ತಂದಿದೆ. ಇದರ ಜೊತೆಗೆ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಸುಗಳಿಗೆ ಬಹುಮಾನ ವಿತರಣೆ, ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡಿ ಜತೆಗೆ ಬೃಹತ್ ಮಟ್ಟದಲ್ಲಿ ರಸ ಮಂಜರಿ ಕಾರ್ಯಕ್ರಮ ಹಮ್ಮಿಕೊಂಡು ಸಾರ್ವಜನಿಕರಿಗೆ ಮನರಂಜನೆ ನೀಡುವ ಮೂಲಕ ಕೆ.ಎಂ.ಉದಯ್ ಸಾಂಸ್ಕೃತಿಕ ರಾಯಬಾರಿಯಾಗಿದ್ದಾರೆ ಎಂದು ಬಣ್ಣಿಸಿದರು.

ಶಾಸಕ ಕೆ.ಎಂ.ಉದಯ್ ಅವರು ಮುಂದಿನ ದಿನಗಳಲ್ಲೂ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಿಗೆ ಮನರಂಜನೆ ನೀಡಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿ ಎಂದರು.

ಕೆ.ಆರ್.ಎಸ್ ಜಲಾಶಯದಿಂದ ಕೊನೆ ಭಾಗದ ರೈತರ ಬೇಸಾಯಕ್ಕೆ ಸರಾಗವಾಗಿ ನೀರನ್ನು ಹರಿಸುವ ಮೂಲಕ ರೈತರ ಬದುಕನ್ನು ಹಸನಾಗಿಸುವ ಉದ್ದೇಶದಿಂದ ಜಿಲ್ಲೆಗೆ 2500 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ನಾಲೆಗಳ ಆಧುನಿಕರಣ ಮಾಡಲಾಗುತ್ತಿದೆ ಎಂದರು.

ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ತನ್ನದೇ ಆದ ಹೋರಾಟ ಮಾಡುವ ಮೂಲಕ ಮದ್ದೂರಿನ ಈ ಪುಣ್ಯಭೂಮಿ ಚರಿತ್ರೆಯ ಪುಟಗಳಲ್ಲಿ ದಾಖಲಾಗಿದೆ. ಹಲವು ಘಟಾನುಘಟಿ ನಾಯಕರುಗಳಿಗೆ ಜನ್ಮ ನೀಡಿರುವ ಗಂಡು ಮೆಟ್ಟಿದ ನಾಡಿದು. ಈ ಕ್ಷೇತ್ರದಲ್ಲಿ ಹಲವಾರು ಜನ ನಾಯಕರು ತಮ್ಮದೇ ಆದ ಅಭಿವೃದ್ಧಿ ಕಾರ್ಯಗಳ ಸಾಕ್ಷಿ ಗುಡ್ಡೆಯನ್ನು ಬಿಟ್ಟು ಹೋಗಿದ್ದಾರೆ. ಆದರೆ, ಶಾಸಕ ಉದಯ್ ಆಯ್ಕೆಯಾದ ಮೂರೇ ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ 2 ಸಾವಿರ ಕೋಟಿ ಅನುದಾನವನ್ನು ತಂದು ಹಿಂದೆಂದೂ ಕಂಡರಿಯದ ರೀತಿಯಲ್ಲಿ ಅಭಿವೃದ್ಧಿ ಪರ್ವಕ್ಕೆ ಮುನ್ನುಡಿ ಬರೆದಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಈ ಹಿಂದೆ ಮದ್ದೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮದ್ದೂರು ಕ್ಷೇತ್ರಕ್ಕೆ ಮೆಟ್ರೋ, ಏರ್ಪೋರ್ಟ್ ನಂತಹ ಯೋಜನೆಗಳು ಬೇಡ ರೈತರಿಗೆ ನೀರಾವರಿ ಯೋಜನೆಗಳನ್ನು ನೀಡಿ ಎಂದು ಬೇಡಿಕೆ ಇಟ್ಟಿದ್ದರು. ಹೀಗಾಗಿ ಮದ್ದೂರು ತಾಲೂಕಿನ ಕೊನೆ ಭಾಗಕ್ಕೂ ಸರಾಗವಾಗಿ ನೀರು ಹರಿದು ರೈತರ ಬೇಸಾಯಕ್ಕೆ ನೀರನ್ನು ಹರಿಸುವ ಮೂಲಕ ರೈತರ ಬದುಕನ್ನು ಹಸನಾಗಿಸುವ ಉದ್ದೇಶದಿಂದ ಜಿಲ್ಲೆಗೆ 2500 ಕೋಟಿ ಅನುದಾನ ನೀಡಿದ್ದು, ಅದರಲ್ಲಿ 800 ಕೋಟಿಯನ್ನು ಶಾಸಕರ ಒತ್ತಾಯದ ಮೇರೆಗೆ ನೀರಾವರಿ ಕ್ಷೇತ್ರಕ್ಕೆ ಒಂದಕ್ಕೆ ಮಾತ್ರ ತಾಲೂಕಿಗೆ ಬಿಡುಗಡೆ ಮಾಡುವ ಮೂಲಕ ಸೂಳೆಕೆರೆ, ಮದ್ದೂರು ಕೆರೆಗಳ ಒತ್ತುವರಿ ತೆರವು ಮಾಡಿ ಅಭಿವೃದ್ಧಿಗೊಳಿಸಿ ನಾಲೆಗಳ ಆಧುನಿಕರಣ ಮಾಡುವ ಮೂಲಕ ರೈತರ ಶಾಶ್ವತವಾದ ಸಮಸ್ಯೆಗೆ ಪರಿಹಾರ ಒದಗಿಸುತ್ತಿದ್ದು, ಮೇಕೆದಾಟು ಯೋಜನೆಗೂ ಕೂಡ ಸುಪ್ರೀಂ ಕೋರ್ಟ್ ಅನುಮತಿಯನ್ನು ನೀಡಿದ್ದು, ಈ ಯೋಜನೆ ಜಾರಿಗೆ ಬಂದ ಬಳಿಕ ಈ ಭಾಗದ ನೀರಾವರಿ ಸಮಸ್ಯೆಗೆ ಶಾಶ್ವತವಾದ ಮುಕ್ತಿ ಸಿಗಲಿದೆ ಎಂದು ತಿಳಿಸಿದರು.

ಶಾಸಕ ಕೆ.ಎಂ.ಉದಯ್ ಮಾತನಾಡಿ, ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಮದ್ದೂರು ಉತ್ಸವಕ್ಕೆ ಜನರಿಂದ ಅಭೂತ ಪೂರ್ವ ಬೆಂಬಲ ಸಿಕ್ಕಿದ್ದು ಅತ್ಯಂತ ಸಂತೋಷವಾಗಿದೆ. ಮುಂದಿನ ವರ್ಷದಿಂದ ಮತ್ತಷ್ಟು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಸುಮಾರು 2 ಸಾವಿರ ಕೋಟಿ ಅನುದಾನ ನೀಡಿದ್ದು, ಅದರಲ್ಲಿ ನೀರಾವರಿ ಒಂದೇ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 800 ಕೋಟಿ ಅಧಿಕ ಅನುದಾನ ನೀಡಿರುವುದಕ್ಕೆ ಕ್ಷೇತ್ರದ ಜನರ ಪರವಾಗಿ ಅಭಿನಂದನೆ ಸಲ್ಲಿಸಿದ್ದರು.

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, ಶಾಸಕ ಉದಯ್ ಅವರು ಅಭಿವೃದ್ಧಿ ಜತೆಗೆ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ಮೂಲಕ ಸಮಾಜ ಮುಖಿ ಕೆಲಸಗಳನ್ನು ಮಾಡುತ್ತಿರುವುದು ಶ್ಲಾಘನೀಯ ಸಂಗತಿಯಾಗಿದೆ. ಇತ್ತಿಚಿನ ದಿನಗಳಲ್ಲಿ ರಾಸುಗಳ ಜಾತ್ರೆ ಸಾಕಷ್ಟು ಕ್ಷೀಣಿಸುತ್ತಿರುವ ಸಂದರ್ಭದಲ್ಲಿ ಮದ್ದೂರಿನಲ್ಲಿ ಬೃಹತ್ ರಾಸುಗಳ ಜಾತ್ರೆಯನ್ನು ಆಯೋಜಿಸಿ ದೊಡ್ಡ ಪ್ರಮಾಣದ ಜಾತ್ರೆಯನ್ನಾಗಿ ಪರಿವರ್ತಿಸಿ ಲಕ್ಷಾಂತರ ರೂ ಬಹುಮಾನ ನೀಡುವ ಮೂಲಕ ರೈತರಿಗೆ ಹೆಚ್ಚಿನ ಬೆಂಬಲ ನೀಡಿದ್ದಾರೆ. ಇದರ ಜತೆಗೆ ರಾಮನಗರ, ತುಮಕೂರು ಜಿಲ್ಲೆಗೆ ಸೀಮಿತವಾಗಿದ್ದ ಉತ್ಸವ ಕಾರ್ಯಕ್ರಮ ಮಂಡ್ಯ ಜಿಲ್ಲೆಗೂ ಕಾಲಿಟ್ಟಿದ್ದು, ಪ್ರಥಮವಾಗಿ ಮದ್ದೂರು ಉತ್ಸವ ಎಂಬ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿ ಮನರಂಜನೆ ಜತೆಗೆ ಹಲವಾರು ಪ್ರತಿಭೆಗಳನ್ನು ಗುರುತಿಸುವ ಮೂಲಕ ಅವರನ್ನು ಗೌರವಿಸಿದ್ದಾರೆ ಎಂದರು.

ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮಾತನಾಡಿ, ಶಾಸಕ ಕೆ.ಎಂ.ಉದಯ್ ಅವರು ಜನರ ನಿರೀಕ್ಷೆಗೂ ಮೀರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿದ್ದು, ಈ ಹಿಂದೆ ಆಡಳಿತ ನಡೆಸಿದ್ದ ಯಾವ ಶಾಸಕರೂ ಮಾಡದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಹೊಸ ಹೊಸ ಚಿಂತನೆಗಳ ಮೂಲಕ ಕ್ಷೇತ್ರಕ್ಕೆ ಹೊಸ ರೂಪವನ್ನು ನೀಡುತ್ತಿದ್ದಾರೆ ಎಂದು ಬಣ್ಣಿಸಿದರು.

ಚಿತ್ರನಟ ವಿ.ರವಿಚಂದ್ರನ್ ಮಾತನಾಡಿ, ನಾನು ಕಷ್ಟದಲ್ಲಿದ್ದಾಗ ಯಾರು ಬಳಿಯೂ ಸಹಾಯ ಕೇಳಿರಲಿಲ್ಲ ಆದರೆ, ಡಿಸಿಎಂ ಡಿ.ಕೆ.ಶಿವಕುಮಾರ್, ಶಾಸಕ ಕೆ.ಎಂ.ಉದಯ್ ಅವರು ನಾನು ಸಹಾಯ ಕೇಳದಿದ್ದರು ಅವರೇ ನನಗೆ ಗೊತ್ತಿಲ್ಲದಾಗೆ ಸಹಾಯ ಮಾಡಿದ್ದಾರೆ ಎಂದು ನೆನೆದರು. ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮದ್ದೂರು ಉತ್ಸವವನ್ನು ಅದ್ದೂರಿಯಾಗಿ ಅಚರಣೆ ಮಾಡುತ್ತಿರುವುದು ಮೆಚ್ಚುಗೆಯ ವಿಷಯವಾಗಿದ್ದು, ಪ್ರತಿ ವರ್ಷ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಿ ಎಂದರು.

ಖ್ಯಾತ ನಿರೂಪಕಿ ಅನುಶ್ರೀ ಕಾರ್ಯಕ್ರಮದ ನಿರೂಪಣೆಯನ್ನು ಯಶಸ್ವಿಯಾಗಿ ನಡೆಸಿಕೊಡುವ ಮೂಲಕ ಗಮನ ಸೆಳೆದರು. ಜತೆಗೆ ಹಲವು ನೃತ್ಯ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾರ್ವಜನಿಕರ ಗಮನ ಸೆಳೆದವು. ಕೆಲವು ಹಾಡು ಹಾಗೂ ನೃತ್ಯಗಳು ಯುವಕ, ಯುವತಿಯರು ಕುಪ್ಪಳಿಸುವಂತೆ ಮಾಡಿದ ಪರಿಣಾಮ ಜನರು ಮದ್ದೂರಮ್ಮನ ಕೊಂಡೋತ್ಸವದ ಜತೆಗೆ ರಸಮಂಜರಿ ಕಾರ್ಯಕ್ರಮದ ಖುಷಿಯಲ್ಲಿ ಮಿಂದೆದ್ದರು.

ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಣೆ

ಮದ್ದೂರು ಉತ್ಸವ ಕಾರ್ಯಕ್ರಮದಲ್ಲಿ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ ಮಾಡಲಾಯಿತು.

ಬಹುಮಾನ ವಿತರಣೆ

ಮದ್ದೂರು ಉತ್ಸವದ ಅಂಗವಾಗಿ ಮದ್ದೂರು ನಗರದಲ್ಲಿ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆ, ಮೆಹಂದಿ ಸ್ಪರ್ಧೆ, ಕಬಡ್ಡಿ ಸ್ಪರ್ಧೆ ವಾಲಿಬಾಲ್ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಗಣ್ಯರು ಬಹುಮಾನ ವಿತರಣೆ ಮಾಡಿದರು.

ರಸ ಮಂಜರಿ ಕಾರ್ಯಕ್ರಮದಲ್ಲಿ ಆಗಮಿಸಿದ ಸಹಸ್ರಾರು ಜನರಿಗೆ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನಂದಿನಿ ಬಾದಾಮಿ ಹಾಗೂ ಕುಕ್ಕೀಸ್ ವಿತರಣೆ ಮಾಡಲಾಯಿತು.

ಸಾರ್ವಜನಿಕರಿಂದ ವೆಚ್ಚುಗೆ

ಮದ್ದೂರು ಇತಿಹಾದಲ್ಲಿ ಪ್ರಪ್ರಥಮ ಬಾರಿಗೆ ಶಾಸಕ ಕೆ.ಎಂ.ಉದಯ್ ತಮ್ಮದೆಯಾದ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮದ್ದೂರು ಉತ್ಸವ ಹಮ್ಮಿಕೊಂಡು ನಗರಕ್ಕೆ ದಸರಾ ಮಾದರಿಯಲ್ಲಿ ವಿದ್ಯುತ್ ದೀಪಾಲಂಕಾರ, ರಾಸುಗಳಿಗೆ ಬಹುಮಾನ ವಿತರಣೆ ಜತೆಗೆ ಇತರೆ ಸ್ಪಧೆಗಳನ್ನು ಹಮ್ಮಿಕೊಂಡು ಬಹುಮಾನ ನೀಡುವ ಜತೆಗೆ ರಸಮಂಜರಿ ಕಾರ್ಯಕ್ರಮ ಯಶಸ್ವಿ ನಡೆಸಿದರ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ನಿರ್ದೆಶಕಿ ವಿನುತಾ ಉದಯ್, ಟ್ರಸ್ಟಿ ಕೆ.ಎಂ.ರವಿ, ಚಿತ್ರನಟರಾದ ವಿ.ರವಿಚಂದ್ರನ್, ಜೋಗಿ ಪ್ರೇಮ್, ಚಿತ್ರ ನಟಿ ರಕ್ಷಿತಾ ಪ್ರೇಮ್, ಶಾಸಕರಾದ ರವಿಕುಮಾರ್ ಗಣಿಗ, ಇಕ್ಬಾಲ್ ಹುಸೇನ್, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ರವಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಚಲುವರಾಜು, ನಿರ್ದೆಶಕ ಪಿ.ಸಂದರ್ಶ, ಮನ್ ಮುಲ್ ನಿರ್ದೇಶಕ ಹರೀಶ್ ಬಾಬು, ಮಾಜಿ ಸೈನಿಕ ಸಿಪಾಯಿ ಶ್ರೀನಿವಾಸ್ ಸೇರಿದಂತೆ ಇತರರು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

ಹೊಸ ರೂಪದ ಜನಗಣತಿ: ಮನೆ-ಮನೆ ಸಮೀಕ್ಷೆಯಲ್ಲಿ ಲಿವ್-ಇನ್ ಸಂಬಂಧಗಳಿಗೂ ಸಿಗಲಿದ್ಯಾ ಮನ್ನಣೆ?!

ರಾಜ್ಯದಲ್ಲಿ ‘ಸಾರ್ವತ್ರಿಕ ನವಜಾತ ಶಿಶು ತಪಾಸಣೆ ಯೋಜನೆ’ ಜಾರಿ: ಇನ್ಮುಂದೆ ಈ ಎಲ್ಲದಕ್ಕೂ ಉಚಿತ ಚಿಕಿತ್ಸೆ!

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ‘ಸಾರ್ವತ್ರಿಕ ನವಜಾತ ಶಿಶು ತಪಾಸಣೆ ಯೋಜನೆ’ ಜಾರಿ: ಇನ್ಮುಂದೆ ಈ ಎಲ್ಲದಕ್ಕೂ ಉಚಿತ ಚಿಕಿತ್ಸೆ!

2 Mins Read

ನನ್ನ ಶಾಸಕತ್ವ ಹೋದರೂ ಚಿಂತೆಯಿಲ್ಲ, ಬೇಸೂರಲ್ಲಿ ಅಣು ಸ್ಥಾವರಕ್ಕೆ ಬಿಡುವುದಿಲ್ಲ: ಸರ್ಕಾರಕ್ಕೆ ಬೇಳೂರು ಸವಾಲ್!

2 Mins Read

ಪಕ್ಷಭೇದ ಮರೆತ ನಾಯಕರು: ಸಾಗರದ ಬೇಸೂರಲ್ಲಿ ಅಣು ಸ್ಥಾವರ ವಿರೋಧಿಸಿ ಒಂದಾದ ಬೇಳೂರು – ಹಾಲಪ್ಪ!

2 Mins Read
Recent News

ಸುವೇಂದು ಅಧಿಕಾರಿ ಪಿಎ ಹತ್ಯೆಗೆ ಭೀಕರ ಸ್ಕೆಚ್: ಎಸ್‌ಯುವಿ ಮೂಲಕ ಅಡ್ಡಗಟ್ಟಿ, ಬೈಕ್‌ನಲ್ಲಿ ಬಂದು ಗುಂಡಿನ ಸುರಿಮಳೆ! ಹೇಗಿತ್ತು ಗೊತ್ತಾ ಪ್ಲಾನ್?

ಮದ್ದೂರು ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಟ್ರಸ್ಟ್ ಮೂಲಕ ಸಮಾಜ ಮುಖಿ ಕೆಲಸ ಶ್ಲಾಘನೀಯ: ಡಿಸಿಎಂ ಡಿ.ಕೆ.ಶಿವಕುಮಾರ್

ಹೊಸ ರೂಪದ ಜನಗಣತಿ: ಮನೆ-ಮನೆ ಸಮೀಕ್ಷೆಯಲ್ಲಿ ಲಿವ್-ಇನ್ ಸಂಬಂಧಗಳಿಗೂ ಸಿಗಲಿದ್ಯಾ ಮನ್ನಣೆ?!

ಇನ್‌ಸ್ಟಾಗ್ರಾಮ್‌ನಲ್ಲಿ ‘ಮಹಾ ಶುದ್ಧೀಕರಣ’: ವಿರಾಟ್ ಕೊಹ್ಲಿ, ಕೈಲಿ ಜೆನ್ನರ್ ಫಾಲೋವರ್ಸ್ ಸಂಖ್ಯೆಯಲ್ಲಿ ಭಾರಿ ಕುಸಿತ; ಕೋಟಿಗಟ್ಟಲೆ ಖಾತೆ ಡಿಲೀಟ್ ಮಾಡಿದ ಮೆಟಾ!

State News
KARNATAKA

ಮದ್ದೂರು ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಟ್ರಸ್ಟ್ ಮೂಲಕ ಸಮಾಜ ಮುಖಿ ಕೆಲಸ ಶ್ಲಾಘನೀಯ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow09 KARNATAKA 4 Mins Read

ಮಂಡ್ಯ : ಮದ್ದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿ ಜತೆಗೆ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರದಲ್ಲಿ ಮದ್ದೂರು ಉತ್ಸವ…

ರಾಜ್ಯದಲ್ಲಿ ‘ಸಾರ್ವತ್ರಿಕ ನವಜಾತ ಶಿಶು ತಪಾಸಣೆ ಯೋಜನೆ’ ಜಾರಿ: ಇನ್ಮುಂದೆ ಈ ಎಲ್ಲದಕ್ಕೂ ಉಚಿತ ಚಿಕಿತ್ಸೆ!

ನನ್ನ ಶಾಸಕತ್ವ ಹೋದರೂ ಚಿಂತೆಯಿಲ್ಲ, ಬೇಸೂರಲ್ಲಿ ಅಣು ಸ್ಥಾವರಕ್ಕೆ ಬಿಡುವುದಿಲ್ಲ: ಸರ್ಕಾರಕ್ಕೆ ಬೇಳೂರು ಸವಾಲ್!

ಪಕ್ಷಭೇದ ಮರೆತ ನಾಯಕರು: ಸಾಗರದ ಬೇಸೂರಲ್ಲಿ ಅಣು ಸ್ಥಾವರ ವಿರೋಧಿಸಿ ಒಂದಾದ ಬೇಳೂರು – ಹಾಲಪ್ಪ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.