ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ವೈಪರೀತ್ಯದಿಂದಾಗಿ ಇಂದು ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗ್ಗೆ ಪಹಲ್ಗಾಮ್ ಮತ್ತು ಬಾಲ್ಟಾಲ್ ಮಾರ್ಗಗಳಿಂದ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಮತ್ತು ಯಾವುದೇ ಯಾತ್ರಿಕರಿಗೆ ಪವಿತ್ರ ಗುಹೆ ದೇಗುಲದ ಕಡೆಗೆ ತೆರಳಲು ಅನುಮತಿಸಲಾಗಿಲ್ಲ. ಹವಾಮಾನ ಸುಧಾರಿಸಿದ ನಂತರ ಯಾತ್ರೆ ಪುನರಾರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದಕ್ಕೂ ಮೊದಲು, ಜುಲೈ 8 ರಂದು ಮೇಘ ಸ್ಫೋಟದಿಂದಾಗಿ 16 ಜನರು ಸಾವನ್ನಪ್ಪಿದರು ಮತ್ತು 30 ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದರು. ಈ ಕಾರಣದಿಂದ ಮೂರು ದಿನಗಳ ಕಾಲ ಯಾತ್ರೆಯನ್ನು ನಿಲ್ಲಿಸಲಾಗಿತ್ತು. ಸೋಮವಾರ ಪಹಲ್ಗಾಮ್ ಮಾರ್ಗದ ಮೂಲಕ ಮತ್ತು ಮಂಗಳವಾರ ಬಾಲ್ಟಾಲ್ ಮಾರ್ಗದ ಮೂಲಕ ಯಾತ್ರೆ ಮತ್ತೆ ಪುನರಾರಂಭವಾಗಿತ್ತು.