ಕಲಬುರಗಿ : ನರೇಂದ್ರ ಮೋದಿ ಸತ್ತರೆ ಈ ದೇಶದಲ್ಲಿ ಯಾರು ಪ್ರಧಾನಿ ಅಭ್ಯರ್ಥಿ ಇಲ್ಲವೇ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಒಂದು ಹೇಳಿಕೆಗೆ ವಿರೋಧಿಸುವ ಭರದಲ್ಲಿ ಕಲ್ಬುರ್ಗಿಯ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ಉಮೇಶ್ ಜಾಧವ ಅವರು, ಒಂದು ಎಡವಟ್ಟನ್ನು ಮಾಡಿಕೊಂಡಿದ್ದಾರೆ.
ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜು ಕಾಗೆ ಹೇಳಿಕೆ ವಿರೋಧಿಸುವ ದರದಲ್ಲಿ ಡಾ. ಉಮೇಶ್ ಯಾದವ್ ಎಡವಟ್ಟು ಮಾಡಿಕೊಂಡಿದ್ದು, ಹೇಳಿಕೆ ವಿರೋಧಿಸುವ ಭರದಲ್ಲಿ ಡಾ. ಮಹೇಶ್ ಯಾದವ್ ಎಡವಟ್ಟು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅಕ್ಕ ಸತ್ತರೆ ಅಮಾವಾಸ್ಯೆ ನಿಲ್ಲುವುದಿಲ್ಲ ಎಂದು ಉಮೇಶ್ ಜಾಧವ ಹೇಳಿಕೆ ನೀಡಿದ್ದಾರೆ. ಕಲ್ಬುರ್ಗಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಈ ಹೇಳಿಕೆ ಮೂಲಕ ಎಡವಟ್ಟು ಮಾಡಿಕೊಂಡಿದ್ದಾರೆ.
ನಮ್ಮಲ್ಲಿ ಬಹಳ ಜನ ಪ್ರಧಾನಿ ಅಭ್ಯರ್ಥಿಗಳಿದ್ದಾರೆ.ನಮ್ಮಲ್ಲಿ ಸೂಕ್ತ ಸಮಯ ಬಂದಾಗ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ.ಕಾಂಗ್ರೆಸ್ ನಲ್ಲಿ ಪ್ರಧಾನಿ ಅಭ್ಯರ್ಥಿ ಇದ್ದಾರೋ ಇಲ್ಲವೋ ಎಂದು ನೋಡಿಕೊಳ್ಳಲಿ ಎಂದು ರಾಜುಕಾಗೆ ಹೇಳಿಕೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾದವ್ ತಿರುಗೇಟು ನೀಡಿದ್ದಾರೆ.