ಬೆಂಗಳೂರು: ಇಂದು ಸ್ಯಾಂಡಲ್ ವುಡ್ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುತ್ತಿದ್ದ ವೇಳೆಯಲ್ಲಿ ದಾರಿಯ ಮಧ್ಯೆಯೇ ಆಂಬುಲೆನ್ಸ್ ಕೆಟ್ಟು ನಿಂತಿರುವುದಾಗಿ ತಿಳಿದು ಬಂದಿದೆ.
ಗುರುಪ್ರಸಾದ್ ಅವರು ನೆಲಮಂಗಲ ಬಳಿಯ ಮಾದನಾಯಕನಹಳ್ಳಿಯಲ್ಲಿದ್ದಂತ ಬಾಡಿಗೆ ಫ್ಲ್ಯಾಟ್ ನಲ್ಲಿ ಇಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಸ್ಥಳಕ್ಕೆ ತೆರಳಿದ್ದಂತ ಪೊಲೀಸರು, ನೇಣಿನ ಕುಣಿಕೆಯಿಂದ ಕೆಳಗೆ ಇಳಿಸಿ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದರು.
ನಟ ಗುರುಪ್ರಸಾದ್ ಶವವನ್ನು ಸಾಗಿಸುತ್ತಿದ್ದಂತ ಆಂಬುಲೆನ್ಸ್ ಯಶವಂತಪುರ ಬಳಿಯಲ್ಲಿ ದಾರಿ ಮಧ್ಯೆಯೇ ಕೆಟ್ಟು ನಿಂತಿರುವುದಾಗಿ ತಿಳಿದು ಬಂದಿದೆ. ಆಂಬುಲೆನ್ಸ್ ಕೆಟ್ಟು ನಿಂತ ಕಾರಣ, ಮತ್ತೊಂದು ಆಂಬುಲೆನ್ಸ್ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ಗುರುಪ್ರಸಾದ್ ಪಾರ್ಥೀವ ಶರೀರವನ್ನು ಸಾಗಿಸಲಾಗಿದೆ ಎನ್ನಲಾಗುತ್ತಿದೆ.
ಪ್ರಯಾಣಿಕರಿಗೆ ಗುಡ್ ನ್ಯೂಸ್: ಛತ್ ಪೂಜೆ ಹಬ್ಬಕ್ಕೆ ವಿಶೇಷ ರೈಲು ಸಂಚಾರ
ಮುಸ್ಲಿಮರ ಓಲೈಕೆಗಾಗಿ ಜಮೀನು ಕಬಳಿಕೆ, ಇದರ ವಿರುದ್ಧ ಬಿಜೆಪಿ ಬೃಹತ್ ಹೋರಾಟ: ಆರ್.ಅಶೋಕ್