ಬೆಂಗಳೂರು : ತಿ.ನರಸೀಪುರ ತಾಲೂಕಿನಲ್ಲಿ ಆಂಬುಲೆನ್ಸ್ ಸೇವೆ ಸ್ಥಗಿತ; ರೋಗಿಗಳ ಪರದಾಟʼ ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ಮಾಧ್ಯಮ ವರದಿಯನ್ನು ಗಮನಿಸಿದ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿರುತ್ತಾರೆ.
ಅದರಂತೆ, ತಾಲೂಕಿನ 4 ಹೋಬಳಿ ಮಟ್ಟದಲ್ಲಿ ತಲಾ ಒಂದು 108 ತುರ್ತು ವಾಹನಗಳನ್ನು ಕಾಯ್ದಿರಿಸಿ, ಅಗತ್ಯ ಸೇವೆಗಳನ್ನು ನೀಡಲಾಗುತ್ತಿದೆ. ತಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾಯ್ದಿರಿಸಿದ್ದ ಆಂಬುಲೆನ್ಸ್ ಅನ್ನು ತುರ್ತು ನಿರ್ವಹಣೆಯ ಕಾರಣ ಕಾರ್ಯಗಾರಕ್ಕೆ ಕಳುಹಿಸಲಾಗಿದ್ದು, ಪರ್ಯಾಯವಾಗಿ ಬದಲಿ ತುರ್ತು ವಾಹನವನ್ನು ನಿಯೋಜಿಸಿ ಸೇವೆಗಳಿಗೆ ಯಾವುದೇ ತೊಂದರೆಯಾಗದಂತೆ ನಿರ್ವಹಿಸಲಾಗಿರುತ್ತದೆ.
ಸ್ಥಳೀಯವಾಗಿ ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ @osd_cmkarnataka `ಎಕ್ಸ್ʼ ಖಾತೆಗೆ ಟ್ಯಾಗ್ ಮಾಡಿ.