Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸ್ ಉಚಿತ ತರಬೇತಿಗೆ ಅರ್ಜಿ ಅಹ್ವಾನ

30/04/2026 2:42 PM

ಸದ್ಯಕ್ಕೆ ಕರ್ನಾಟಕದಲ್ಲಿ ‘ಸಿಎಂ ಬದಲಾವಣೆ’ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಸಂದೇಶ

30/04/2026 2:36 PM

ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು! ತಣ್ಣಗಿನ ಆಹಾರಗಳಿಗೆ ನಗರದಲ್ಲಿ ಫುಲ್‌ ಡಿಮ್ಯಾಂಡ್‌

30/04/2026 2:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿ ಮಾಡಿ: ಸಚಿವ ಹೆಚ್.ಕೆ ಪಾಟೀಲ್ ಗೆ MLC ರಮೇಶ್ ಬಾಬು ಪತ್ರ
KARNATAKA

ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿ ಮಾಡಿ: ಸಚಿವ ಹೆಚ್.ಕೆ ಪಾಟೀಲ್ ಗೆ MLC ರಮೇಶ್ ಬಾಬು ಪತ್ರ

By kannadanewsnow0909/11/2025 9:32 PM

ಬೆಂಗಳೂರು: ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿಯ ಅತ್ಯಗತ್ಯವಿದೆ. ಆ ನಿಟ್ಟಿನಲ್ಲಿಯೂ ಸರ್ಕಾರ ಕ್ರಮವಹಿಸುವಂತೆ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಕಾನೂನು ಮತ್ತು ಸಂಸದೀಯ ಇಲಾಖಾ ಸಚಿವ ಹೆಚ್.ಕೆ ಪಾಟೀಲ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಈ ಕುರಿತಂತೆ ಪತ್ರ ಬರೆದಿರುವಂತ ಅವರು, ಕರ್ನಾಟಕ ಲೋಕಾಯುಕ್ತ ಕಾಯಿದೆ ಅನ್ವಯ ಪ್ರತಿ ವರ್ಷ ಕರ್ನಾಟಕ ರಾಜ್ಯ ವಿಧಾನ ಮಂಡಲದ ಸದಸ್ಯರು ತಮ್ಮ ಆಸ್ತಿಯ ವಿವರಗಳನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಕೆ ಮಾಡಬೇಕಾಗಿರುತ್ತದೆ. ತಮ್ಮ ಆಸ್ತಿ ವಿವರಗಳನ್ನು ಜೂನ್ 30ರ ಒಳಗೆ ಸಲ್ಲಿಸದ ಶಾಸಕರ ಪಟ್ಟಿಯನ್ನು ಲೋಕಾಯುಕ್ತ ಕಾಯಿದೆಯ ಪ್ರಕಾರ ಬಿಡುಗಡೆ ಮಾಡಿರುತ್ತದೆ . ಸಾರ್ವಜನಿಕ ಹಿತ ದೃಷ್ಟಿಯಿಂದ ಇದು ಅವಶ್ಯಕತೆ ಇರುತ್ತದೆ. ಅದೇ ರೀತಿ ಲೋಕಾಯುಕ್ತ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಲೋಕಾಯುಕ್ತರು/ ಉಪ ಲೋಕಾಯುಕ್ತರು ತಮ್ಮ ಆಸ್ತಿ ಪಟ್ಟಿಯನ್ನು ಪ್ರಕಟಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅವಶ್ಯಕವಾಗಿರುತ್ತದೆ ಎಂದಿದ್ದಾರೆ.

ಜುಲೈ 12, 2021 ರಲ್ಲಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನಾನು ಒಂದು ಮನವಿಯನ್ನು ಮಾಡಿ ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಮಾಡಿ ಲೋಕಾಯುಕ್ತದಲ್ಲಿ ಕಾರ್ಯನಿರ್ವಹಿಸುವ ಲೋಕಾಯುಕ್ತರು ಮತ್ತು ಉಪಲೋಕಾಯುಕ್ತರು ಸಾರ್ವಜನಿಕ ಹಿತ ದೃಷ್ಟಿಯಿಂದ ತಮ್ಮ ಆಸ್ತಿ ಮತ್ತು ದಾಯಿಕ ಪಟ್ಟಿಯನ್ನು ಸಾರ್ವಜನಿಕವಾಗಿ ಪ್ರಕಟಿಸಲು ಕಾಯ್ದೆ ತರಬೇಕಾಗಿ ಮನವಿ ಮಾಡಿದ್ದೆನು. ನನ್ನ ಮನವಿಗೆ ಅನುಗುಣವಾಗಿ ಸರ್ಕಾರವು 5-8-2021ರಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಪತ್ರ ಬರೆದು ಕಾಯ್ದೆ ತಿದ್ದುಪಡಿಗೆ ಮುಂದಿನ ಕ್ರಮ ಕೈಗೊಳ್ಳಲು ಸೂಚನೆಯನ್ನು ನೀಡಿತ್ತು. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ 27-10-2021ರಲ್ಲಿ ಕರ್ನಾಟಕ ಲೋಕಾಯುಕ್ತದ ನಿಬಂಧಕರಿಗೆ ಪತ್ರ ಬರೆದ ನನ್ನ ಪತ್ರದ ಮೇಲೆ ಕಾಯ್ದೆ ತಿದ್ದುಪಡಿಗೆ ಅಭಿಪ್ರಾಯ ನೀಡುವಂತೆ ಕೇಳಿರುತ್ತಾರೆ. ಆದರೆ ಲೋಕಾಯುಕ್ತ ನಿಬಂಧಕರಿಂದ ಸದರಿ ಪತ್ರಕ್ಕೆ ಉತ್ತರವಾಗಲಿ ಅಥವಾ ಮಾಹಿತಿಯಾಗಲಿ ನೀಡಿರುವ ಬಗ್ಗೆ ಇದುವರೆಗೆ ಯಾವುದೇ ಮಾಹಿತಿಯನ್ನು ಸಾರ್ವಜನಿಕವಾಗಿ ನೀಡಿರುವುದಿಲ್ಲ ಎಂದು ತಿಳಿಸಿದ್ದಾರೆ.

ಲೋಕಾಯುಕ್ತ ಸಂಸ್ಥೆ ಪಾರದರ್ಶಕವಾಗಿ ನಡೆದುಕೊಳ್ಳಬೇಕಾಗಿರುವುದು ಸಾರ್ವಜನಿಕ ಹಿತ ದೃಷ್ಟಿಯಿಂದ ಪ್ರಮುಖವಾಗಿರುತ್ತದೆ. ಕರ್ನಾಟಕದಲ್ಲಿ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಸ್ವಯಂ ಪ್ರೇರಿತವಾಗಿ ತಮ್ಮ ಆಸ್ತಿ ವಿವರಗಳನ್ನು ಪ್ರಕಟಪಡಿಸುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತಂದು ಲೋಕಾಯುಕ್ತರು /ಉಪಲೋಕಾಯುಕ್ತರು ತಮ್ಮ ಆಸ್ತಿಯ ವಿವರಗಳನ್ನು ಬಹಿರಂಗಗೊಳಿಸುವಂತೆ ತಿದ್ದುಪಡಿ ಮಾಡುವುದು ಅನಿವಾರ್ಯವಾಗಿರುತ್ತದೆ. ಕರ್ನಾಟಕ ಲೋಕಾಯುಕ್ತ ಸಂಸ್ಥೆಯು 2017 -18 ನೇ ಸಾಲಿನಿಂದ 2021-22ನೇ ಸಾಲಿನವರೆಗೆ ವಾರ್ಷಿಕ ವರದಿಗಳನ್ನು ವಿಧಾನಮಂಡಲದಲ್ಲಿ ಮಂಡಿಸಿರುವುದಿಲ್ಲ. ಕರ್ನಾಟಕ ವಿಧಾನ ಪರಿಷತ್ತಿನ 153 ನೇ ಅದಿವೇಶನದಲ್ಲಿ ಮಂಡಿಸಲಾದ ಇಲಾಖಾ ವಾರ್ಷಿಕ ವರದಿ ಲೆಕ್ಕ ಪತ್ರಗಳ ಪಟ್ಟಿಯಲ್ಲಿ, ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ತನ್ನ 4 ವರ್ಷದ ವಾರ್ಷಿಕ ವರದಿಗಳನ್ನು ಮಂಡಿಸಿಲ್ಲದೆ ಇರುವುದು ತಿಳಿದು ಬರುತ್ತದೆ. ಪ್ರತಿ ಸಂಸ್ಥೆಯು ತನ್ನ ವಾರ್ಷಿಕ ವರದಿಗಳನ್ನು ಮತ್ತು ಲೆಕ್ಕ ಪತ್ರಗಳನ್ನು ವಿಧಾನ ಮಂಡಲದಲ್ಲಿ ಮಂಡಿಸಬೇಕಾಗಿದ್ದು, ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ತನ್ನ ವರದಿಗಳನ್ನು ಮಂಡಿಸದಿರುವುದು ವಿಧಾನಪರಿಷತ್ತಿನ ವರದಿಯಲ್ಲಿ ಕಂಡುಬರುತ್ತದೆ. ತಾವು ದಯಮಾಡಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ತನ್ನ ವಾರ್ಷಿಕ ವರದಿಯನ್ನು ಅನುಮೋದನೆಗಾಗಿ ನಿಯಮಾನುಸಾರ ವಿಧಾನ ಮಂಡಲದಲ್ಲಿ ಮಂಡಿಸಲು ಕ್ರಮ ಕೈಗೊಳ್ಳಬೇಕಾಗಿ ಕೋರಿದ್ದಾರೆ.

ಪಾರದರ್ಶಕ ಆಡಳಿತದ ಕಾರಣಕ್ಕಾಗಿ ಲೋಕಾಯುಕ್ತ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ನ್ಯಾಯಮೂರ್ತಿಗಳು ಮತ್ತು ಸರ್ಕಾರಿ ನೌಕರರು ತಮ್ಮ ಆಸ್ತಿಯ ವಿವರಗಳನ್ನು ಬಹಿರಂಗಗೊಳಿಸುವುದು ಒಂದು ಆರೋಗ್ಯಕರ ಮತ್ತು ಅವಶ್ಯಕವಾದ ಕ್ರಮವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಬರುವ ಅಧಿವೇಶನದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಕಾಯ್ದೆಗೆ ತಿದ್ದುಪಡಿ ತಂದು ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಇರುವ ಲೋಕಾಯುಕ್ತರು, ಉಪಲೋಕಾಯುಕ್ತರು ಮತ್ತು ನೌಕರರು ಪ್ರತಿ ವಾರ್ಷಿಕ ವರ್ಷದಲ್ಲಿ ತಮ್ಮ ಆಸ್ತಿಗಳನ್ನು ಬಹಿರಂಗಗೊಳಿಸಲು ಕಾಯ್ದೆಗೆ ತಿದ್ದುಪಡಿ ತರಬೇಕೆಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ವಿನಂತಿಸಿದ್ದಾರೆ.

BREAKING: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಕೆ: ವಿಡಿಯೋ ವೈರಲ್ ಬೆನ್ನಲ್ಲೇ ಪ್ರಕರಣ ದಾಖಲು

BREAKING: ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಗೆ ಕೇಂದ್ರದ ತಡೆ: ಪರಿಸರವಾದಿಗಳ ಹೋರಾಟಕ್ಕೆ ಗೆಲುವು

Share. Facebook Twitter LinkedIn WhatsApp Email

Related Posts

ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸ್ ಉಚಿತ ತರಬೇತಿಗೆ ಅರ್ಜಿ ಅಹ್ವಾನ

30/04/2026 2:42 PM1 Min Read

ಸದ್ಯಕ್ಕೆ ಕರ್ನಾಟಕದಲ್ಲಿ ‘ಸಿಎಂ ಬದಲಾವಣೆ’ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಸಂದೇಶ

30/04/2026 2:36 PM2 Mins Read

ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು! ತಣ್ಣಗಿನ ಆಹಾರಗಳಿಗೆ ನಗರದಲ್ಲಿ ಫುಲ್‌ ಡಿಮ್ಯಾಂಡ್‌

30/04/2026 2:27 PM3 Mins Read
Recent News

ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸ್ ಉಚಿತ ತರಬೇತಿಗೆ ಅರ್ಜಿ ಅಹ್ವಾನ

30/04/2026 2:42 PM

ಸದ್ಯಕ್ಕೆ ಕರ್ನಾಟಕದಲ್ಲಿ ‘ಸಿಎಂ ಬದಲಾವಣೆ’ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಸಂದೇಶ

30/04/2026 2:36 PM

ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು! ತಣ್ಣಗಿನ ಆಹಾರಗಳಿಗೆ ನಗರದಲ್ಲಿ ಫುಲ್‌ ಡಿಮ್ಯಾಂಡ್‌

30/04/2026 2:27 PM

ಬೆಂಗಳೂರಲ್ಲಿ ದುರಂತ: ಸಿಎಸ್ ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್- ಲೋಕಾಯುಕ್ತ ನ್ಯಾ.ಪಾಟೀಲ್‌ ಗುಡುಗು

30/04/2026 2:21 PM
State News
KARNATAKA

ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸ್ ಉಚಿತ ತರಬೇತಿಗೆ ಅರ್ಜಿ ಅಹ್ವಾನ

By kannadanewsnow0930/04/2026 2:42 PM KARNATAKA 1 Min Read

ಶಿವಮೊಗ್ಗ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 2026 ರ ಮೇ ತಿಂಗಳ ಕೊನೆಯ ವಾರದಲ್ಲಿ “ಮೊಬೈಲ್…

ಸದ್ಯಕ್ಕೆ ಕರ್ನಾಟಕದಲ್ಲಿ ‘ಸಿಎಂ ಬದಲಾವಣೆ’ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಸಂದೇಶ

30/04/2026 2:36 PM

ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು! ತಣ್ಣಗಿನ ಆಹಾರಗಳಿಗೆ ನಗರದಲ್ಲಿ ಫುಲ್‌ ಡಿಮ್ಯಾಂಡ್‌

30/04/2026 2:27 PM

ಬೆಂಗಳೂರಲ್ಲಿ ದುರಂತ: ಸಿಎಸ್ ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್- ಲೋಕಾಯುಕ್ತ ನ್ಯಾ.ಪಾಟೀಲ್‌ ಗುಡುಗು

30/04/2026 2:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.