Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಅವರು ಅತ್ಯಂತ ಗಟ್ಟಿ ನಾಯಕ’: ಪ್ರಧಾನಿ ಮೋದಿ ಕಾರ್ಯಶೈಲಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್!

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

​ಗ್ರಾಹಕರಿಗೆ ದಾರಿ ತಪ್ಪಿಸುವ ಜಾಹೀರಾತು: ಕಿಂಡರ್ ಜಾಯ್, ಸಫೋಲ ಸೇರಿದಂತೆ 14 ಪ್ರಮುಖ ಬ್ರ್ಯಾಂಡ್‌ಗಳಿಗೆ FSSAI ಶಾಕ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING: ವಿಧಾನಸಭೆಯಲ್ಲಿ ಮತಪತ್ರ ಬಳಕೆಗೆ ಅವಕಾಶ ನೀಡುವ ತಿದ್ದುಪಡಿ ಮಸೂದೆ ಅಂಗೀಕಾರ
KARNATAKA

BIG BREAKING: ವಿಧಾನಸಭೆಯಲ್ಲಿ ಮತಪತ್ರ ಬಳಕೆಗೆ ಅವಕಾಶ ನೀಡುವ ತಿದ್ದುಪಡಿ ಮಸೂದೆ ಅಂಗೀಕಾರ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇನ್ನು ಮುಂದೆ ವಿದ್ಯುನ್ಮಾನ ಮತಯಂತ್ರಗಳ (EVM) ಬದಲಿಗೆ ಹಳೆಯ ಮಾದರಿಯ ಮತಪತ್ರಗಳನ್ನು (Ballot Paper) ಬಳಸಲು ಅವಕಾಶ ನೀಡುವ ‘ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ವು ವಿಧಾನಸಭೆಯಲ್ಲಿ ತೀವ್ರ ಗದ್ದಲದ ನಡುವೆ ಅಂಗೀಕಾರಗೊಂಡಿದೆ.

ಸಚಿವ ಪ್ರಿಯಾಂಕ್ ಖರ್ಗೆ ಮಂಡಿಸಿದ ಈ ವಿಧೇಯಕವು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ದೊಡ್ಡ ವಾಕ್ಸಮರಕ್ಕೆ ಕಾರಣವಾಯಿತು. ಮಸೂದೆಯನ್ನು ವಿರೋಧಿಸಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಮಸೂದೆಯ ಪ್ರತಿಯನ್ನು ಹರಿದು ಹಾಕಿ ಸದನದಿಂದ ಹೊರನಡೆದರು.

ಸರ್ಕಾರದ ವಾದ: ಇವಿಎಂ ಮೇಲೆ ನಂಬಿಕೆ ಕುಂದುತ್ತಿದೆ

ಮಸೂದೆಯ ಪರವಾಗಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಇವಿಎಂ ಪ್ರಕ್ರಿಯೆಯ ಬಗ್ಗೆ ದೇಶಾದ್ಯಂತ ಅನುಮಾನಗಳು ವ್ಯಕ್ತವಾಗುತ್ತಿವೆ ಎಂದು ಸಮರ್ಥಿಸಿಕೊಂಡರು.

  • ಮತದಾನದ ವ್ಯತ್ಯಾಸ: ಮಹಾರಾಷ್ಟ್ರ ಚುನಾವಣೆಯಲ್ಲಿ ಸಂಜೆ 5 ಗಂಟೆಗೆ ಶೇ. 58.22 ರಷ್ಟಿದ್ದ ಮತದಾನ ರಾತ್ರಿ ವೇಳೆಗೆ ಶೇ. 68.02 ಕ್ಕೆ ಏರಿಕೆಯಾಗಿದೆ. ಕೇವಲ 5 ಗಂಟೆಗಳಲ್ಲಿ 50 ಲಕ್ಷ ಮತಗಳು ಹೇಗೆ ಸೇರ್ಪಡೆಯಾದವು ಎಂದು ಅವರು ಪ್ರಶ್ನಿಸಿದರು.

  • ಚುನಾವಣಾ ಆಯೋಗದ ಮೌನ: ಹರಿಯಾಣ ಮತ್ತು ಮಧ್ಯಪ್ರದೇಶದಲ್ಲೂ ಇಂತಹ ಸಂಶಯಾಸ್ಪದ ಏರಿಕೆಗಳು ಕಂಡುಬಂದಿವೆ. ಈ ಬಗ್ಗೆ ಚುನಾವಣಾ ಆಯೋಗವು ಸಮರ್ಪಕ ಉತ್ತರ ನೀಡುತ್ತಿಲ್ಲ. ಹೀಗಾಗಿ ಪಾರದರ್ಶಕತೆಗಾಗಿ ಮತಪತ್ರದ ಮೊರೆ ಹೋಗುವುದು ಅನಿವಾರ್ಯ ಎಂದರು.

  • ಜಾಗತಿಕ ಮಾದರಿ: ಜರ್ಮನಿಯಂತಹ ಮುಂದುವರಿದ ದೇಶಗಳೇ ಇವಿಎಂ ಬಿಟ್ಟು ಮತ್ತೆ ಮತಪತ್ರಕ್ಕೆ ಮರಳಿವೆ ಎಂದು ಅವರು ಉದಾಹರಣೆ ನೀಡಿದರು.

ಪ್ರತಿಪಕ್ಷಗಳ ವಾಗ್ದಾಳಿ: “ಇದು ತುಘಲಕ್ ದರ್ಬಾರ್”

ಬಿಜೆಪಿ ನಾಯಕರು ಸರ್ಕಾರದ ಈ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದ್ದು, ಇದು ರಾಜ್ಯವನ್ನು ಮತ್ತೆ ‘ಶಿಲಾಯುಗ’ಕ್ಕೆ ಕೊಂಡೊಯ್ಯುವ ಪ್ರಯತ್ನ ಎಂದು ಟೀಕಿಸಿದರು.

  • ಆರ್. ಅಶೋಕ್: ಇವಿಎಂ ತಂದಿದ್ದೇ ಕಾಂಗ್ರೆಸ್ ಸರ್ಕಾರ. ಈಗ ಸೋಲಿನ ಭೀತಿಯಿಂದ ಅದರ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಸುಪ್ರೀಂ ಕೋರ್ಟ್ ಕೂಡ ಇವಿಎಂ ಬಳಕೆಯನ್ನು ಎತ್ತಿ ಹಿಡಿದಿದೆ. ಅಧಿಕಾರಿಗಳ ಮೇಲೆಯೇ ನಂಬಿಕೆ ಇಲ್ಲದ ಈ ಸರ್ಕಾರ ಮೋಸ ಮಾಡುತ್ತಿದೆ ಎಂದು ಕಿಡಿಕಾರಿದರು.

  • ಸುನಿಲ್ ಕುಮಾರ್: ಬ್ರಾಂಡ್ ಬೆಂಗಳೂರು ಬಗ್ಗೆ ಮಾತನಾಡುವವರು ತಂತ್ರಜ್ಞಾನ ಬಿಟ್ಟು ಹಿಂದೆ ಹೋಗುತ್ತಿದ್ದಾರೆ. ಬೂತ್ ಕ್ಯಾಪ್ಚರಿಂಗ್ ಮತ್ತು ಮತಗಳ್ಳತನ ಮಾಡಲು ಸರ್ಕಾರ ಈ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು.

  • ಸುರೇಶ್ ಕುಮಾರ್: ಐಟಿ ಸಚಿವರೇ ಇಂತಹ ತಂತ್ರಜ್ಞಾನ ವಿರೋಧಿ ಮಸೂದೆ ತಂದಿರುವುದು ದ್ರೌರ್ಭಾಗ್ಯ. ಇದು ರಾಹುಲ್ ಗಾಂಧಿ ಅವರ ಹಿತಾಸಕ್ತಿ ಕಾಪಾಡಲು ತಂದ ಬಿಲ್ ಹೊರತು ಜನರಿಗಲ್ಲ ಎಂದರು.

  • ಅಶ್ವತ್ಥನಾರಾಯಣ: ನಾಮಪತ್ರ ಸಲ್ಲಿಕೆಯ ಕೊನೆಯ ದಿನದವರೆಗೂ ಮತದಾರರ ಹೆಸರು ಸೇರಿಸಲು ಅವಕಾಶ ನೀಡಿರುವುದು ಚುನಾವಣೆಯಲ್ಲಿ ಅಕ್ರಮ ಎಸಗುವ ಉದ್ದೇಶವನ್ನು ಹೊಂದಿದೆ ಎಂದು ದೂರಿದರು.

ಅಳಂದ ಮತಗಳ್ಳತನದ ಬಗ್ಗೆ ಕಿತ್ತಾಟ

ಸದನದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಳಂದದಲ್ಲಿ ಮತಗಳ್ಳತನ ಸಾಬೀತಾಗಿದೆ ಎಂದು ಹೇಳಿದಾಗ, ಅಶ್ವತ್ಥನಾರಾಯಣ ಅವರು ಸವಾಲು ಹಾಕಿದರು. “ಧೈರ್ಯವಿದ್ದರೆ ಆ ವರದಿಯನ್ನು ಸದನದಲ್ಲಿ ಮಂಡಿಸಿ, ಆಗ ನೀವೇ ಸಿಕ್ಕಿಹಾಕಿಕೊಳ್ಳುತ್ತೀರಿ” ಎಂದು ಸವಾಲು ಹಾಕಿದರು. ಇದಕ್ಕೆ ಉತ್ತರಿಸಿದ ಖರ್ಗೆ, “ಈಗಾಗಲೇ 22,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆಯಾಗಿದ್ದು, ಅದರಲ್ಲಿ ಎ1 ಮತ್ತು ಎ2 ಆರೋಪಿಗಳಾಗಿ ಬಿಜೆಪಿ ಅಭ್ಯರ್ಥಿಗಳೇ ಇದ್ದಾರೆ” ಎಂದು ತಿರುಗೇಟು ನೀಡಿದರು.

ಅಂತಿಮವಾಗಿ ಮಸೂದೆಯು ಅಂಗೀಕಾರವಾಯಿತು. ಆದರೆ, ಈ ಬದಲಾವಣೆಯು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೇಲೆ ಎಂತಹ ಪರಿಣಾಮ ಬೀರಲಿದೆ ಎಂಬುದನ್ನು ಕಾದುನೋಡಬೇಕಿದೆ.

ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸೇವೆ ಪುನರಾರಂಭ

EPFO ಮಾಸ್ಟರ್ ಪ್ಲಾನ್: 10,181 ಕೋಟಿ ರೂ. ಹಕ್ಕು ಪಡೆಯದ ಹಣ ಪಾವತಿಗೆ ‘ಆಟೋ-ಸೆಟಲ್ಮೆಂಟ್’ ಫೀಚರ್ ಜಾರಿ!

Share. Facebook Twitter LinkedIn WhatsApp Email

Related Posts

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

2 Mins Read

ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ

2 Mins Read

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read
Recent News

​’ಅವರು ಅತ್ಯಂತ ಗಟ್ಟಿ ನಾಯಕ’: ಪ್ರಧಾನಿ ಮೋದಿ ಕಾರ್ಯಶೈಲಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್!

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

​ಗ್ರಾಹಕರಿಗೆ ದಾರಿ ತಪ್ಪಿಸುವ ಜಾಹೀರಾತು: ಕಿಂಡರ್ ಜಾಯ್, ಸಫೋಲ ಸೇರಿದಂತೆ 14 ಪ್ರಮುಖ ಬ್ರ್ಯಾಂಡ್‌ಗಳಿಗೆ FSSAI ಶಾಕ್!

​ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಿಚ್ಚು: ಹಾರ್ಮುಜ್ ಜಲಸಂಧಿ ಮತ್ತೆ ಬಂದ್! ಇಸ್ರೇಲ್ ಭೀಕರ ದಾಳಿ ಬೆನ್ನಲ್ಲೇ ಇರಾನ್ ನೌಕಾಪಡೆ ಬಿಗಿ ಕ್ರಮ!

State News
KARNATAKA

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಈಗ ಮತ್ತೊಂದು ಆರ್ಥಿಕ ಹೊರೆಯ…

ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

ಶೀಘ್ರದಲ್ಲೇ ‘ಕೈ’ ಹಿಡಿಯಲಿದ್ದಾರೆ ‘ಬಿಜೆಪಿ ಶಾಸಕ’ರು; ಮದ್ದೂರು ಶಾಸಕ ಕೆ.ಎಂ.ಉದಯ್ ಸ್ಪೋಟಕ ಭವಿಷ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.