ದಾವಣಗೆರೆ: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳಿಗೆ ಇ-ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳನ್ನು ತಿದ್ದುಪಡಿ ಮಾಡಲಾಗಿರುತ್ತದೆ.
ಅಸ್ತಿ ಮಾಲೀಕರು ತಮ್ಮ ಅಸ್ತಿಗಳಿಗೆ ಈ ಕೆಳಕಂಡ ದಾಖಲೆಗಳನ್ನು ನೀಡಿ ಇ-ಖಾತಾ ಪಡೆದುಕೊಳ್ಳಬಹುದು. ಇದರಿಂದ ಅನಧಿಕೃತ ಸ್ವತ್ತುಗಳ ಮಾಲೀಕರು ತಮ್ಮ ಸ್ವತ್ತಿನ ಕಂದಾಯವನ್ನು ಪಾವತಿಸಿ, ಇ-ಖಾತಾ ಪಡೆಯಬಹುದು. ಸ್ವತ್ತಿನ ಮಾಲೀಕರು ತಮ್ಮ ನಗರ ಸ್ಥಳೀಯ ಸಂಸ್ಥೆಗೆ ಭೇಟಿ ನೀಡಿ ಅಧಿಕೃತ ಆಸ್ತಿಗಳಿಗೆ ಇ-ಖಾತಾ ಪಡೆಯಲು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಸ್ವತ್ತಿನ ಮಾಲೀಕತ್ವದ ದಾಖಲೆಗಳಾದ ನೋಂದಾಯಿತ ಪತ್ರಗಳು, ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ, ಚಾಲ್ತಿ ಸಾಲಿನವರೆಗೆ ಕಂದಾಯ ಪಾವತಿ ರಶೀದಿ, ಋಣಭಾರ ಪ್ರಮಾಣ ಪತ್ರ ಹಾಗೂ ಮಾಲೀಕರ ಫೆÇೀಟೋ, ಆಸ್ತಿ ಇರುವ ಸ್ಥಳದ ಪೆÇೀಟೋ, ಮಾಲೀಕರ ಗುರುತಿನ ದಾಖಲೆ ಪ್ರತಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಿದ 7 ದಿನಗಳ ಒಳಾಗಾಗಿ ಇ-ಖಾತಾ ಪಡೆಯಬಹುದು.
ಅನಧೀಕೃತ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಸಲ್ಲಿಸಬೇಕಾದ ದಾಖಲೆಗಳು: ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕ ಸಾಬೀತುಪಡಿಸುವ ಸೆಪ್ಟೆಂಬರ್ 10,2024ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು, ದಾನಪತ್ರ, ವಿಭಾಗ ಪತ್ರಗಳು, ಹಕ್ಕು ಖುಲಾಸೆ ಪತ್ರಗಳು, ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಅಸ್ತಿ ತೆರಿಗೆ ಪಾವತಿ ರಶೀದಿ, ಮಾಲೀಕರ ಫೆÇೀಟೋ ಮತ್ತು ಸ್ವತ್ತಿನ ಪೆÇೀಟೋ, ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸಬೇಕು. ಅನಧೀಕೃತ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಫೆಬ್ರವರಿ 11 ರಿಂದ 3 ತಿಂಗಳ ಅವಧಿ
ಇ-ಖಾತಾ ಪಡೆಯಲು ಅವಕಾಶವಿಲ್ಲದಿರುವ ಸ್ವತ್ತುಗಳು: ಸರ್ಕಾರಿ ಜಾಗದಲ್ಲಿರುವ ಸ್ವತ್ತುಗಳು, ಸರ್ಕಾರದ ನಿಗಮ, ಮಂಡಳಿಗಳ ಜಾಗಗಳು,ನಗರ ಸ್ಥಳೀಯ ಸಂಸ್ಥೆಗಳ ಜಾಗದಲ್ಲಿನ ಸ್ವತ್ತುಗಳು,
ಹೆಚ್ಚಿನ ಮಾಹಿತಿಗಾಗಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಆಯಾ ಸ್ಥಳೀಯ ಸಂಸ್ಥೆಗಳ ಕಚೇರಿಯ ನೋಟೀಸ್ ನಲ್ಲಿ ಸಹಾಯವಾಣಿ ಸಂಖ್ಯೆ ಮತ್ತು ಅರ್ಜಿ ಸ್ವೀಕರಿಸಲು ನೇಮಿಸಿದ ಸಿಬ್ಬಂದಿಯ ಹೆಸರನ್ನು ನಮೂದಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ. ತಿಳಿಸಿದ್ದಾರೆ.
Heat Wave: ರಾಜ್ಯದಲ್ಲಿ ಮಾರ್ಚ್-ಮೇವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಇರಲಿದೆ: ಹವಾಮಾನ ಇಲಾಖೆ
BREAKING: ವೀರಶೈವ, ಲಿಂಗಾಯತರ ನೈಜ ಸಂಖ್ಯೆ ತಿಳಿಯಲು ‘ಖಾಸಗಿ ಜಾತಿ ಜನಗಣತಿ’: ಸಚಿವ ಈಶ್ವರ್ ಖಂಡ್ರೆ ಘೋಷಣೆ