ಅಮೇರಿಕಾ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತರನನ್ನು ನಿನ್ನೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ರೀತಿಯಾಗಿ ಗುಂಡಿಟ್ಟು ಹತ್ಯೆ ಮಾಡಿದಂತ ಆರೋಪಿಯ ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಎಫ್ ಬಿ ಐ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್ ಕಾರ್ಯಕ್ರಮವೊಂದರಲ್ಲಿ ಗುಂಡಿಕ್ಕಿ ಹತ್ಯೆಗೈಯಲಾಗಿದೆ. ಸೆಪ್ಡೆಂಬರ್.10ರಂದು ವಾಷಿಂಗ್ಟನ್ ನ ಉತಾಹ್ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು ಎಂದಿದೆ.
ಚಾರ್ಲಿ ಕಿರ್ಕ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಆರೋಪಿಯ ಸುಳಿವು ನೀಡಿದವರಿಗೆ 1 ಮಿಲಿಯನ್ ಡಾಲರ್ ಬಹುಮಾನ ನೀಡುವುದಾಗಿ ಎಫ್ ಬಿ ಐ ಘೋಷಿಸಿದೆ. ಈ ಮೂಲಕ ತನ್ನ ಆಪ್ತ ಚಾರ್ಲಿ ಕಿರ್ಕ್ ಹತ್ಯೆ ಆರೋಪಿಯ ಪತ್ತೆಗೆ ಅಮೇರಿಕಾ ಅಧ್ಯಕ್ಷ ಟ್ರಂಪ್ ಮಹತ್ವದ ಕ್ರಮ ಕೈಗೊಂಡಿದ್ದಾರೆ.
ಯಾರೇ ದ್ವೇಷ ಭಾಷಣ ಮಾಡಿದರೂ ಕಾನೂನಿನಡಿ ಕ್ರಮ: ಸಚಿವ ಲಕ್ಷ್ಮೀ ಹೆಬ್ಬಾಳ್ಕರ್
ಶಿವಮೊಗ್ಗ: ಸೆ.16ರಂದು ಜಿಲ್ಲೆಯ ಈ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ | Power Cut