ಮಂಡ್ಯ : ಡಿ.30 ರಂದು ಮಂಡ್ಯದಲ್ಲಿ ‘ಅಮಿತ್ ಶಾ’ ಬೃಹತ್ ಸಮಾವೇಶ ನಡೆಯಲಿದ್ದು, ಈ ಹಿನ್ನೆಲೆ ಬಿಜೆಪಿಯಿಂದ ಭರ್ಜರಿ ಸಿದ್ದತೆ ನಡೆದಿದೆ.
ಅಮಿತ್ ಶಾ ಅವರ ಸ್ವಾಗತಕ್ಕೆ ಭರ್ಜರಿ ಸಿದ್ದತೆ ಮಾಡಲಾಗುತ್ತಿದೆ. ಮಂಡ್ಯದ ಸರ್ಕಾರಿ ಮಹಾ ವಿದ್ಯಾಲಯದಲ್ಲಿ ಸಕಲ ಸಿದ್ದತೆ ನಡೆಯುತ್ತಿದೆ. ಮಂಡ್ಯದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
ಇಬ್ಬರು ಸಚಿವರಿಗೆ ಕಾರ್ಯಕ್ರಮದ ಉಸ್ತುವಾರಿ ಜವಾಬ್ದಾರಿ ನೀಡಲಾಗಿದ್ದು, ಸಚಿವ ಕೆ. ಗೋಪಾಲಯ್ಯ ಹಾಗೂ ನಾರಾಯಣ ಗೌಡರು ಅಮಿತ್ ಶಾ ಕಾರ್ಯಕ್ರಮದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಮಂಡ್ಯದಲ್ಲಿ ಶಾ ಸಮಾವೇಶಕ್ಕಾಗಿ ಬೃಹತ್ ಪೆಂಡಾಲ್ ಹಾಕಿಸಲಾಗಿದೆ.
ಮಂಡ್ಯದಲ್ಲಿ ಡಿಸೆಂಬರ್ 30ರಂದು 1 ಲಕ್ಷ ಜನರ ಬೃಹತ್ ಸಮಾವೇಶವನ್ನು ಪಕ್ಷ ಆಯೋಜಿಸಿದ್ದು, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ಹಾಸನಗಳ ಜನರು ಮಂಡ್ಯದ ಸಮಾವೇಶದಲ್ಲಿ ಭಾಗವಹಿಸುವರು. ಅಮಿತ್ ಶಾ ಅವರ ಭೇಟಿಯಿಂದ ಬಿಜೆಪಿ ಬಲ ಹೆಚ್ಚಲಿದೆ. ಈ ಸಮಾವೇಶ 30ರ ಮಧ್ಯಾಹ್ನ ಒಂದು ಗಂಟೆಗೆ ನಡೆಯಲಿದೆ. ಮಂಡ್ಯ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಭದ್ರಕೋಟೆಯಾಗಿ ಉಳಿಯುವುದಿಲ್ಲ. ಅಲ್ಲಿ ಸಂಸದರ ಸ್ಥಾನವನ್ನು ಸೋತಿದ್ದಾರೆ. ಸಮಾವೇಶದ ಯಶಸ್ಸಿಗಾಗಿ ಸಚಿವರಾದ ಗೋಪಾಲಯ್ಯ ಮತ್ತು ನಾರಾಯಣಗೌಡರು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.2023ರ ಅಸೆಂಬ್ಲಿ ಚುನಾವಣೆಯಲ್ಲಿ ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ ಮತ್ತು ಹಾಸನ ಭಾಗದಲ್ಲಿ ಅತಿ ಹೆಚ್ಚು ಬಿಜೆಪಿ ಶಾಸಕರು ಗೆಲ್ಲಬೇಕೆಂಬ ಗುರಿ ನಮ್ಮದು. ಪಕ್ಷ ಬಲಪಡಿಸಲು ವಿಶೇಷ ಗಮನ ಕೊಡುತ್ತಿದ್ದೇವೆ ಎಂದು ತಿಳಿಸಿದರು.
Watch | ತಾಯಿ ಸೋನಿಯಾ ಗಾಂಧಿಯೊಂದಿಗೆ ರಾಹುಲ್ ಗಾಂಧಿ ಸಂತೋಷದ ಕ್ಷಣ : ವಿಡಿಯೋ ವೈರಲ್
BIGG NEWS : ‘ಸಿದ್ದೇಶ್ವರ ಸ್ವಾಮೀಜಿ’ ಆರೋಗ್ಯ ವದಂತಿ ಕುರಿತು ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ |B.C Nagesh