ಬೆಂಗಳೂರು : ಸುಳ್ಳುಗಳ ಸರದಾರ ಎಲೆಕ್ಟ್ರೊಲ್ ಬಾಂಡ್ ಸರದಾರ ಅಮಿತ್ ಷಾ. ಕೇಂದ್ರ ಸಚಿವ ಅಮಿತ್ ಶಾ ಹಸಿ ಸುಳ್ಳುಗಳನ್ನು ಹರಿಬಿಟ್ಟಿದ್ದಾರೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದರು.
ಅಮಿತ್ ಶಾ ಸೂರ್ಯನಿಗೆ ಟಾರ್ಚ್ ಹಿಡಿಯುವ ಕೆಲಸ ಮಾಡಿದ್ದಾರೆ. ಬರ ಪರಿಹಾರ ಕೋರಿ ವರದಿ ಸಲ್ಲಿಸಲು ಮೂರು ತಿಂಗಳು ವಿಳಂಬ ಆರೋಪ ಮಾಡಿದ್ದರು. ತಮ್ಮ ತಪ್ಪು ಮುಚ್ಚಿಕೊಳ್ಳಲು ಅಮಿತ್ ಶಾ ಇಂತಹ ಹೇಳಿಕೆಗಳನ್ನು ನೀಡಿದ್ದಾರೆ. 2023ರ ಸೆಪ್ಟೆಂಬರ್ ನಲ್ಲಿ ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಮನವಿ ಸಲ್ಲಿಸಲಾಗಿತ್ತು ಎಂದರು.
ಮುಂಗಾರು ಹಂಗಾಮಿನಲ್ಲಿ ಬರಗಾಲ ಘೋಷಣೆ ಮಾಡಬೇಕೆಂದು ಮನವಿ ಸಲ್ಲಿಸಲಾಗಿತ್ತು. ಅಕ್ಟೋಬರ್ 31 ರವರೆಗೆ ಕೇಂದ್ರ ಸರ್ಕಾರ ಸೂಚನೆ ಕೊಡುತ್ತೆ. ಸೆಪ್ಟೆಂಬರ್ 13ರಂದು ನಾವು ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡಿದ್ದೇವೆ. ಮುಂಗಾರು ಹಂಗಾಮಿನ ಮಧ್ಯದಲ್ಲಿ ಬರಗಾಲ ಘೋಷಣೆಗೆ ಕೇಂದ್ರ ಸರ್ಕಾರವೇ ಅವಕಾಶವನ್ನು ಕಲ್ಪಿಸಿದೆ ಎಂದರು.
ಅಕ್ಟೋಬರ್ 31ಕ್ಕೆ ಬರಗಾಲ ಘೋಷಣೆ ಮಾಡಬೇಕೆಂದು ಕೇಂದ್ರ ಹೇಳಿದರೆ. ಒಂದುವರೆ ತಿಂಗಳ ಮೊದಲೇ ನಾವು ಬರಗಾಲ ಘೋಷಣೆ ಮಾಡಿದ್ದೆವು. ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದ್ದೆವು ಸೆಪ್ಟೆಂಬರ್ 27ರಂದು ಕೇಂದ್ರ ಸರ್ಕಾರದ ಗೃಹ ಕಾರ್ಯದರ್ಶಿಗೆ ಬರೆದ ಪತ್ರವೂ ಕೂಡ ಇದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಕಂದಾಯ ಶಿವ ಕೃಷ್ಣಪ್ಪ ಹಿರೇಗೌಡ ಹೇಳಿಕೆ ನೀಡಿದರು.