ಮಂಡ್ಯ : ನಾಳೆ ಶುಕ್ರವಾರ ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರ ಸ್ವಾಗತಕ್ಕೆ ಬಿಜೆಪಿ ಎಲ್ಲಾ ಸಿದ್ದತೆ ಮಾಡಿಕೊಂಡಿದೆ.
ಅಮಿತ್ ಶಾ ಆಗಮನದ ವಿಧಾನಸಭೆ ಕಲಾಪ ಇಂದಿಗೆ ಮೊಟಕುಗೊಳಿಸಲಾಗುತ್ತಿದೆ. ಈ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಅಮಿತ್ ಶಾ ಬಂದ್ರು ಅಂದ್ರೆ ಸದನ ಮಾಡುವುದಕ್ಕೆ ಏನು..?ಇವರು ಅಮಿತ್ ಶಾ ಬರ್ತಾನೆ ಅಂತ ನಿಲ್ಲಿಸಿದ್ರೆ ಹೇಗೆ? ಎಂದು ಬಿಜೆಪಿ ಸರ್ಕಾರ ವಿರುದ್ಧ ಕಿಡಿಕಾರಿದರು. ರಾಜ್ಯಕ್ಕೆ ಅಮಿತ್ ಶಾ ಬರುತ್ತಾರೆ ಎಂದು ಬಿಜೆಪಿ ಸರ್ಕಾರ ಸದನವನ್ನು ನಿಲ್ಲಿಸಿದೆ ಎಂದು ಕಿಡಿಕಾರಿದರು.