ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಗ್ಗೆ ಅಪಸ್ವರ ಎತ್ತಿದ್ದವರಿಗೆ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಅವರು ಪಕ್ಷದ ನಾಯಕರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.
ಮೈಸೂರಿನ ಱಡಿಸನ್ ಬ್ಲೂ ಹೋಟೆಲ್ನಲ್ಲಿ ಭಾನುವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ಯಾರೂ ಅಪಸ್ವರ ಎತ್ತಬಾರದು. ಕಳೆದಬಾರಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸಂದರ್ಭ ಇಂತಹ ಅಪಸ್ವರದ ಮಾತುಗಳಿಂದಲೇ ಅವರಿಗೆ ಸೋಲಾಗಿತ್ತು. ಅದೇ ಕೆಲಸವನ್ನ ನೀವು ಮಾಡಕೂಡದು ಅಂತ ನಾಯಕರಿಗೆ ಸೂಚನೆ ನೀಡಿದ್ದಾರೆ ಅಂತ ತಿಳಿದು ಬಂದಿದೆ. ಇನ್ನೂ ಮೈತ್ರಿಗೆ ಧಕ್ಕೆಯಾಗುವಂತಹ ಯಾವುದೇ ಹೇಳಿಕೆಗಳನ್ನು ಯಾರೂ ಕೊಡಬಾರದು ಎಂದು ಎಲ್ಲ ನಾಯಕರನ್ನು ಉದ್ದೇಶಿಸಿ ಅಮಿತ್ ಶಾ ಸೂಚನೆ ನೀಡಿದ್ದಾರಂತೆ.