ಮೈಸೂರು : ಡಾ. ಬಿ ಆರ್ ಅಂಬೇಡ್ಕರ್ ಅವರ ಕುರಿತು ಕೇಂದ್ರದ ಗ್ರಹ ಸಚಿವ ಅಮಿತ್ ಶಾ ಅವರು ಹೇಳಿಕೆ ನೀಡಿದ್ದನ್ನು ಖಂಡಿಸಿ ಇದೆ ಜನವರಿ 7ರಂದು ವಿವಿಧ ಸಂಘಟನೆಗಳಿಂದ ಮೈಸೂರು ಜಿಲ್ಲೆ ಬಂದ್ ಗೆ ಕರೆ ನೀಡಿವೆ.
ಇತ್ತೀಚಿಗೆ ಅಮಿತ್ ಶಾ ಅವರು, ಸಂಸತ್ತಿನಲ್ಲಿ ಅಂಬೇಡ್ಕರ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.ಈ ಒಂದು ಹೇಳಿಕೆಯಿಂದ ಇಡೀ ದೇಶದಾದ್ಯಂತ ಭಾರಿ ವಿರೋಧ ವ್ಯಕ್ತವಾಗಿದ್ದು ಹಲವು ಕಡೆಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಜನವರಿ 7ರಂದು ಪ್ರಗತಿಪರ ಸಂಘಟನೆ ಅಂಬೇಡ್ಕರ್ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮೈಸೂರು ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ.