ಬೆಂಗಳೂರು: ಚನ್ನಪಟ್ಟಣದಿಂದ ರೋಡ್ ಶೋ ನಡೆಸುತ್ತಿರುವ ಬಗ್ಗೆ ಕೇಳಿದಾಗ, “ಮಾಡಲಿ ಬಿಡಿ. ಅವರು ಚನ್ನಪಟ್ಟಣವನ್ನೇ ಯಾಕೆ ಆಯ್ಕೆ ಮಾಡಿದ್ದಾರೆ ಎಂದರೆ. ಅಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಂದಾಗಿದ್ದು, ಕಾರ್ಯಕರ್ತರು ಒಂದಾಗುತ್ತಿಲ್ಲ. ಅಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ದಿನಬೆಳಗಾದರೆ ರಾಜಕೀಯ ಸಂಘರ್ಷ ಮಾಡುತ್ತಿದ್ದಾರೆ. ಈ ಮೈತ್ರಿಯಿಂದ ಏನಾಗಲಿದೆ ಎಂಬ ಅನುಭವ ಯೋಗೇಶ್ವರ್ ಗೆ ಇಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜೆಡಿಎಸ್ ಕಾರ್ಯಕರ್ತರು ಅತಂತ್ರ ಸ್ಥಿತಿ ತಲುಪಿದ್ದಾರೆ. ಅಲ್ಲಿನ ಜನಕ್ಕೆ ಡಿ.ಕೆ ಸುರೇಶ್ ಏನು ಎಂಬುದು ಗೊತ್ತಿದೆ. ಅಮಿತ ಷಾ ಬಂದರೆ ಬಲ ಬರಬಹುದು ಎಂದು ಮಾಡುತ್ತಿದ್ದಾರೆ. ಇಬ್ಬರೂ ಸೇರಿ ಕಾರ್ಯಕರ್ತರ ಸಭೆ ಯಾಕೆ ಮಾಡಲಿಲ್ಲ? ಇವರಿಬ್ಬರೂ ಒಂದಾದ ತಕ್ಷಣ ಕಾರ್ಯಕರ್ತರು ಒಂದಾಗುತ್ತಾರಾ? ರಾಮನಗರ ಹಾಗೂ ಮಂಡ್ಯ ಜಿಲ್ಲೆ ರಾಜಕಾರಣ ನೋಡಲು ಆಗುತ್ತಿಲ್ಲ ಎಂದರು.
ಕಳೆದ ಬಾರಿ ಕುಮಾರಸ್ವಾಮಿ ಅವರು ಆಡಿದ ಮಾತು, ಹೇಳಿದ ವಿಚಾರ, ನಡೆದುಕೊಂಡ ರೀತಿ ನೋಡಿದರೆ ಈಗ ಪರಿಸ್ಥಿತಿ ಬದಲಾಗಿದೆ. ಕಳೆದ ಬಾರಿ ಚುನಾವಣೆಯಲ್ಲಿ ನಿಖಿಲ್ ಪರ ಪ್ರಚಾರ ಮಾಡುವಂತೆ ಚೆಲುವರಾಯಸ್ವಾಮಿ ಅವರಿಗೆ ಆಹ್ವಾನ ನೀಡಿ ಎಂದು ಹೇಳಿದೆ. ಅನಿತಾ ಕುಮಾರಸ್ವಾಮಿ ಅವರು ಕೂಡ ಚೆಲುವರಾಯಸ್ವಾಮಿ ಮನೆಗೆ ಹೋಗಲು ಸಿದ್ಧರಿದ್ದರು. ಆದರೆ ಕುಮಾರಸ್ವಾಮಿ ಅವರು ಚೆಲುವರಾಯಸ್ವಾಮಿ ಅವರ ಮನೆಗೆ ಹೋಗೋದು ಬೇಡ ಎಂದಿದ್ದರು. ಈಗ ಕುಮಾರಸ್ವಾಮಿ ಎಲ್ಲರ ಮನೆಗೆ ಹೋಗಲು ಸಿದ್ಧ ಎಂದು ಹೇಳುತ್ತಿದ್ದಾರೆ. ಅವರಲ್ಲಿ ಆಗಿರುವ ಪರಿವರ್ತನೆಗೆ ಬಹಳ ಸಂತೋಷ. ಮೈತ್ರಿ ಸರ್ಕಾರವನ್ನು ಬೀಳಿಸಿದ ಬಿಜೆಪಿ ನಾಯಕರ ಜತೆಗೆ ತಬ್ಬಾಡುತ್ತಿದ್ದಾರೆ. ಇದನ್ನು ಆ ಮತದಾರರೇ ತೀರ್ಮಾನ ಮಾಡಬೇಕು” ಎಂದು ತಿಳಿಸಿದರು.
‘ಲೋಕಸಭಾ ಚುನಾವಣೆ’ಗೆ ವೆಚ್ಚ ಮಾಡಲು ನಮ್ಮ ಬಳಿ ‘ಹಣ’ವೇ ಇಲ್ಲ: ರಾಹುಲ್ ಗಾಂಧಿ ಅಳಲು
ತಾಂಡಾಗಳನ್ನು `ಕಂದಾಯ ಗ್ರಾಮ’ಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ : ಸಚಿವ ಪ್ರಿಯಾಂಕ್ ಖರ್ಗೆ