ಬೆಂಗಳೂರು:ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
BIGG NEWS : ಕೊರೊನಾ 4 ನೇ ಅಲೆಯಿಂದ ಸಾವು ನೋವು ಸಂಭವಿಸಲ್ಲ : ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು!
ಹಳೆ ಮೈಸೂರು ಭಾಗದಲ್ಲಿ ಪಕ್ಷ ಬಲವರ್ಧನೆಗೆ ಪೂರಕವಾಗಿ ಮಂಡ್ಯದಲ್ಲಿ ಸಾರ್ವಜನಿಕ ಸಭೆ ಮತ್ತು ಬೆಂಗಳೂರಿನಲ್ಲಿ ಬೂತ್ ಅಧ್ಯಕ್ಷರ ಸಮಾವೇಶ ನಡೆಯಲಿದೆ. ಪಕ್ಷದ ನಾಯಕರ ಜೊತೆಯೂ ಸಭೆ ನಡೆಸಲು ಸಮಯ ನಿಗದಿಪಡಿಸಿದ್ದಾರೆ.ಡಿ.29 ರಂದು ರಾತ್ರಿ 10.5ಕ್ಕೆ ಯಲಹಂಕ ವಾಯುನೆಲೆಗೆ ಆಗಮಿಸಲಿರುವ ಅಮಿತ್ ಶಾ ರಾತ್ರಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
BIGG NEWS : ಕೊರೊನಾ 4 ನೇ ಅಲೆಯಿಂದ ಸಾವು ನೋವು ಸಂಭವಿಸಲ್ಲ : ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು!
ಡಿ.30 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12.15 ರವರೆಗೆ ಸಮಯವನ್ನು ಕಾಯ್ದಿರಿಸಲಾಗಿದೆ. ಮಧ್ಯಾಹ್ನ 1.10ಕ್ಕೆ ಯಲಹಂಕ ವಾಯುನೆಲೆಯಿಂದ ಭಾರತೀಯ ವಾಯುಪಡೆ ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ಪ್ರಯಾಣಿಸಲಿದ್ದಾರೆ. 1.45 ರಿಂದ 3.15 ರವರೆಗೆ ಮಂಡ್ಯದ ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿ ನಡೆಯಲಿರುವ ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.