ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ( PSI Recruitment Scam ) ಸಿಐಡಿ ಅಧಿಕಾರಿಗಳಿಂದ ( CID Officer ) ಬಂಧಿತರಾಗಿರುವ ನೇಮಕಾತಿ ವಿಭಾಗದ ಎ.ಡಿ.ಜಿ.ಪಿ ಯಾಗಿದ್ದ ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಯಾರೆಲ್ಲ ರಾಜಕಾರಣಿಗಳು ಇರದಲ್ಲಿ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗಲಿದೆ. “ಉಪ್ಪು ತಿಂದವರು ನೀರು ಕುಡಿಯಲಿ” ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ನೇಮಕಾತಿ ವಿಭಾಗದ ಎ.ಡಿ.ಜಿ.ಪಿ ಯಾಗಿದ್ದ ಅಮ್ರಿತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಯಾರೆಲ್ಲ ರಾಜಕಾರಣಿಗಳು ಇರದಲ್ಲಿ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗಲಿದೆ.
"ಉಪ್ಪು ತಿಂದವರು ನೀರು ಕುಡಿಯಲಿ".
1/2#PSIScam— Siddaramaiah (@siddaramaiah) July 14, 2022
ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ಪಿಎಸ್ಐ ನೇಮಕಾತಿ ‘ಅಕ್ರಮದಲ್ಲಿ ಅನೇಕ ಸಚಿವರು, ಅವರ ಆಪ್ತರು ಶಾಮೀಲಾಗಿರುವ ಸಂದೇಹಗಳಿವೆ. ಈ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಬೇಕು ಎಂದರೆ ಪ್ರಮುಖ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು & ಅಮ್ರಿತ್ ಪೌಲ್ ಬರೆದ ಡೈರಿಯ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕೆಂದು ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪಿಎಸ್ಐ ನೇಮಕಾತಿ ‘ಅಕ್ರಮದಲ್ಲಿ ಅನೇಕ ಸಚಿವರು, ಅವರ ಆಪ್ತರು ಶಾಮೀಲಾಗಿರುವ ಸಂದೇಹಗಳಿವೆ. ಈ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಬೇಕು ಎಂದರೆ ಪ್ರಮುಖ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು & ಅಮ್ರಿತ್ ಪೌಲ್ ಬರೆದ ಡೈರಿಯ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕೆಂದು @BJP4Karnataka ಸರ್ಕಾರವನ್ನು ಒತ್ತಾಯಿಸುತ್ತೇನೆ.
2/2#PSIScam— Siddaramaiah (@siddaramaiah) July 14, 2022