ಬೆಂಗಳೂರು : ಬಿಎಂಟಿಸಿ ಬಸ್ ಗಳಿಂದ ಆಗುವ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡುವ ಪರಿಹಾರ ಮೊತ್ತವನ್ನು ಹೆಚ್ಚಿಸಲಾಗಿದೆ.
ಬಿಎಂಟಿಸಿ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ನೀಡುವ ಮಧ್ಯಂತರ ಪರಿಹಾರ ಮೊತ್ತವನ್ನು 25 ಸಾವಿರ ರೂ.ನಿಂದ 50 ಸಾವಿರ ರೂ.ಗೆ ಹೆಚ್ಚಿಸಿ ನಿಗಮ ಆದೇಶಿಸಿದೆ.
ಬಿಎಂಟಿಸಿ ಬಸ್ ಗಳಿಂದ ಉಂಟಾಗುವ ಅಪಘಾತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಲಳ್ಳುವವರಿಗೆ ಕೂಡಲೇ ಆರ್ಥಿಕ ನೆರವು ನೀಡಲು ಹಾಗೂ ಮರಣೋತ್ತರ ಕ್ರಿಯಾದಿಗಳಿಗೆ ಅನುಕೂಲವಾಗಲು ನಿಗಮದಿಂದ ಮಧ್ಯಂತರ ಪರಿಹಾರವಾಗಿ ಮೊದಲ ಕಂತಿನಲ್ಲಿ 50 ಸಾವಿರ ರೂ. ಪಾವತಿಸಲಾಗುವುದು ಎಂದು ನಿಗಮ ತಿಳಿಸಿದೆ.
ದಾಖಲೆಗಳ ಪರಿಶೀಲನೆ ಕಾರ್ಯ ಮುಗಿದ ಬಳಿಕ 2 ನೇ ಕಂತಿನಲ್ಲಿ ಮತ್ತೆ 50 ಸಾವಿರ ರೂ. ಸೇರಿ ಮೃತರ ಕುಟುಂಬಗಳಿಗೆ ಒಟ್ಟು 1 ಲಕ್ಷ ರೂ. ಪಾವತಿಸಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ.