ಬೆಳಗಾವಿ: ಜಿಲ್ಲೆಯಲ್ಲಿ ಜಾತ್ರೆಯೊಂದರಲ್ಲಿ ಪಾಲ್ಗೊಂಡಿದ್ದಂತ ರಮೇಶ್ ಜಾರಕಿಹೊಳಿ ಪುತ್ರ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದನು. ಈ ಘಟನೆ ಸಂಬಂಧ ಇದೀಗ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಜಾತ್ರೆಯೊಂದರಲ್ಲಿ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದರು. ಈ ಘಟನೆಯ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಈ ಘಟನೆ ಸಂಬಂಧ ಗೋಕಾಕ್ ನ ಶಹರ ಪೊಲೀಸ್ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಎಸ್ ಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ.
SHOCKING: ಮೈಸೂರಲ್ಲಿ ಮುಖ ತೊಳೆಯುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಸಾವು