ಬೆಂಗಳೂರು : ರಾಜ್ಯದಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ 1ನೇ ತರಗತಿಯಿಂದಲೇ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಪಠ್ಯಪುಸ್ತಕ ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರವು 1ನೇ ತರಗತಿಯಿಂದಲೇ ಎನ್ಸಿಇಆರ್ಟಿ ಪಠ್ಯಪುಸ್ತಕ ಅಳವಡಿಸಿಕೊಳ್ಳುವ ಸಂಬಂಧ ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರು ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಚರ್ಚಿಸಿದ್ದಾರೆ.
ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ಎನ್ಸಿಇಆರ್ಟಿ ಪಠ್ಯಪುಸ್ತಕ ಅಳವಡಿಸಿಕೊಳ್ಳುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಶೀಘ್ರವೇ ಅಂತಿಮ ಆದೇಶ ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.