ಬೆಳಗಾವಿ : ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ.ಮಾಮನಿ ಸಾವಿಗೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಕೂಡ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಸವದತ್ತಿಗೆ ಆನಂದ ಮಾಮನಿ ಪಾರ್ಥಿವ ಶರೀರ ಆಗಮಿಸಲಿದ್ದು, ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವೆರಗೆ ತಾಲೂಕು ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಜಿಲ್ಲಾಡಳಿತ ವ್ಯವಸ್ಥೆ ನಡೆಸಿದೆ. ಸಂಜೆ 4 ಗಂಟೆಗೆ ಅವರ ಜಮೀನಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಸಚಿರಾದ ಮುರಗೇಶ್ ನಿರಾಣಿ, ಗೋವಿಂದ ಕಾರಜೋಳ ಸೇರಿದಂತೆ ಹಲವು ಗಣ್ಯರು ಭಾಗವಹಿಸಿಲಿದ್ದಾರೆ.