ಬೆಂಗಳೂರು: ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಬಹುಮತದ ಅಗತ್ಯ ಇದೆ ಆಂತ ಹೇಳುವುದರ ಮೂಲಕ ಹೊಸ ವಿವಾದ ಹುಟ್ಟುಹಾಕಿರುವ ಸಂಸದ ಅನಂತ್ ಕುಮಾರ್ ಹೇಳಿಕೆಗೆ ಬಿಜೆಪಿ ಮಹತ್ವದ ಹೇಳಿಕೆಯನ್ನು ಬಿಡುಗಡೆ ಮಾಡಿದೆ.
ಬಿಜೆಪಿಗೆ ಲೋಕಸಭೆಯಲ್ಲಿ ಬಹುಮತ ಇದೆ, ರಾಜ್ಯಸಭೆಯಲ್ಲಿ ಇಲ್ಲ. ಸಂವಿಧಾನಕ್ಕೆ ತಿದ್ದುಪಡಿ ಮಾಡುವುದಾದರೆ ಬಹುಮತದ ಅಗತ್ಯವಿದೆ. ೀ ನಿಟ್ಟಿನಲ್ಲಿ ಈ ಬಾರಿ ಪ್ರಧಾನಿ ನರೇಂದ್ರ ಮೋದಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಅವರು ಹೇಳಿದ್ದರು.
ಇದಕ್ಕೇ ರಾಜ್ಯ ಬಿಜೆಪಿಯಿಂದಲೇ ವಿರೋಧ ವ್ಯಕ್ತಪಡಿಸಿದೆ.
ಈ ಕುರಿತು ಎಕ್ಸ್ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಘಟಕ (BJP Karnataka), ಸಂಸದ ಅನಂತಕುಮಾರ್ ಹೆಗಡೆ ಅವರ ಸಂವಿಧಾನದ ಬಗೆಗಿನ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯಗಳೇ ಹೊರತು ಪಕ್ಷದ ನಿಲುವನ್ನು ಬಿಂಬಿಸುವುದಿಲ್ಲ, ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ. ಬಿಜೆಪಿ ರಾಷ್ಟ್ರದ ಸಂವಿಧಾನವನ್ನು (Constitution) ಎತ್ತಿಹಿಡಿಯುವ ಅಚಲವಾದ ಬದ್ಧತೆಯನ್ನು ಹೊಂದಿದೆ. ಅವರ ಹೇಳಿಕೆಗಳಿಗೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ಪಕ್ಷವು ಸೂಚಿಸಿದೆ ಎಂದು ತಿಳಿಸಿದೆ.
MP Shri Ananth Kumar Hegde's remarks on the Constitution are his personal views and do not reflect the party's stance. @BJP4India reaffirms our unwavering commitment to uphold the nation's Constitution and will ask for an explanation from Shri Hegde regarding his comments.
— BJP Karnataka (@BJP4Karnataka) March 10, 2024