ಮುಂಬೈ : ಭಾರತ, ಏಷ್ಯಾ ಅಷ್ಟೇ ಅಲ್ಲದೇ ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ- ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿ ದಂಪತಿಯ ಮಗ ಅನಂತ್ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹವು ಶುಕ್ರವಾರ ಅದ್ಧೂರಿಯಾಗಿ ನಡೆಯಿತು. ದೇಶ, ವಿದೇಶಗಳಿಂದ ಬಂದಿದ್ದ ಸಾವಿರಾರು ಸಂಖ್ಯೆಯ ಅತಿಥಿಗಳು ಮದುವೆ ಸಮಾರಂಭದಲ್ಲಿ ಭಾಗೀ ಆಗಿದ್ದರು. ರಾಜಕೀಯ ಕ್ಷೇತ್ರದ ಹಲವು ಗಣ್ಯರು ಆಗಮಿಸಿ ನವ ದಂಪತಿಗೆ ಆಶೀರ್ವದಿಸಿದರು.
ಅಂಬಾನಿ ಕುಟುಂಬದ ಮದುವೆ ಸಮಾರಂಭದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಅನೇಕ ನಾಯಕರು ಕಾಣಿಸಿಕೊಂಡರು. ಇನ್ನು ಇಂದು (ಶನಿವಾರ- ಜುಲೈ 13) ನಡೆಯಲಿರುವ ಆಶೀರ್ವಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಆಡಳಿತ ಪಕ್ಷದ ಹಲವು ನಾಯಕರು, ಪ್ರತಿಪಕ್ಷದ ಹಲವು ಹಿರಿಯ ನಾಯಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಟಿಎಂಸಿ ಪಕ್ಷದ ನಾಯಕಿ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಮಗ ಹಾಗೂ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಿವಾಹದಲ್ಲಿ ಭಾಗವಹಿಸಿದ್ದರು. ಶಿವಸೇನಾ (ಯುಬಿಟಿ) ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಎನ್‌ಸಿಪಿ (ಶರದ್ ಪವಾರ್) ಹಿರಿಯ ನಾಯಕಿ ಸುಪ್ರಿಯಾ ಸುಳೆ ಕೂಡ ಮದುವೆಯಲ್ಲಿ ಉಪಸ್ಥಿತರಿದ್ದರು.
ಅನಂತ್- ರಾಧಿಕಾ ಅವರ ಮದುವೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕೇಂದ್ರದ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್‌ನ ನಾಯಕರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್, ಆನಂದ್ ಶರ್ಮಾ, ಅಜಯ್ ಮಾಕನ್, ಸಲ್ಮಾನ್ ಖುರ್ಷಿದ್, ಅಭಿಷೇಕ್ ಮನು ಸಿಂಘ್ವಿ ಮತ್ತು ರಾಜೀವ್ ಶುಕ್ಲಾ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಹಿರಿಯ ನಾಯಕರು ಉಪಸ್ಥಿತರಿದ್ದರು.
ಎನ್‌ಡಿಎ ಪಕ್ಷದ ಪ್ರಮುಖ ನಾಯಕರಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್, ಬಿಜೆಪಿ ನಾಯಕಿ ಸ್ಮೃತಿ ಇರಾನಿ ಮತ್ತು ಆರ್‌ಪಿಐ ನಾಯಕ ರಾಮದಾಸ್ ಅಠಾವಳೆ ಕೂಡ ಬಂದಿದ್ದರು.
ಸಾರ್ವಜನಿಕರು, ರಾಜ್ಯದ ಹಿತದೃಷ್ಟಿಯಿಂದ ‘BJP ಸರ್ಕಾರ’ದ ಅವಧಿಯ ಅಕ್ರಮ ಬಯಲು: ರಮೇಶ್ ಬಾಬು
BIG NEWS: ‘ರಾಜ್ಯ ಸರ್ಕಾರ’ದಿಂದ ಮಹಾ ಎಡವಟ್ಟು: ‘ಸತ್ತ ಅಧಿಕಾರಿ’ಯನ್ನೇ ವರ್ಗಾವಣೆ